ಮೈಸೂರು : ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನಡುವೆ ಸಿಎಂ ರೇಸ್ ಗಾಗಿ ಸ್ಪರ್ಧೆ ನಡೆಯುತ್ತಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
BIGG BREAKING NEWS : ಮೇಕೆದಾಟು ಅಣೆಕಟ್ಟು ಯೋಜನೆ ಹಿನ್ನೆಲೆ : ಜುಲೈ 26 ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಡಿ.ಕೆ. ಶಿವಕುಮಾರ್ ಬಹಳ ವರ್ಷಗಳಿಂದ ಮುಖ್ಯಮಂತ್ರಿ ಆಗುವ ಕನಸು ಕಾಣುತ್ತಿದ್ದಾರೆ. ಆದರೆ ಕೆಪಿಸಿಸಿ ಅಧ್ಯಕ್ಷರಾಗಿ ಕೆಲಸ ಮಾಡಲು ಕಾಂಗ್ರೆಸ್ ನವರೇ ಬಿಡ್ತಿಲ್ಲ. ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಮಧ್ಯೆ ಸಿಎಂ ರೇಸ್ ಗಾಗಿ ಸ್ಪರ್ಧೆ ನಡೆಯುತ್ತಿದೆ. ಇಬ್ಬರು ನಾನೊಂದು ತೀರ, ನೀನೊಂದು ತೀರ ಎಂಬಂತಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.
ಇನ್ನು ಕೆಆರ್ ಎಸ್ ಡ್ಯಾಂ ಇತಿಹಾಸದಲ್ಲಿ ಯಾವ ಸಿಎಂಗೂ ಸಿಗದ ಅದೃಷ್ಟ ಬಸವರಾಜ ಬೊಮ್ಮಾಯಿಗೆ ಸಿಕ್ಕಿದ್ದು, ಕೇವಲ 8 ತಿಂಗಳ ಅವಧಿಯಲ್ಲಿ 2ನೇ ಬಾರಿಗೆ ಬಾಗಿನ ಅರ್ಪಣೆ ಮಾಡಿದ್ದಾರೆ. ಸಾಮಾನ್ಯವಾಗಿ ಆಗಸ್ಟ್ನಲ್ಲಿ ಭರ್ತಿಯಾಗುತ್ತಿದ್ದ ಕೆಆರ್ ಎಸ್ ಡ್ಯಾಂ ಹೀಗಾಗಿ ಮತ್ತೆ ಬಾಗಿನ ಅರ್ಪಣೆಗೆ ಒಂದು ವರ್ಷದ ಕಾಯಬೇಕಿತ್ತು.