ಚಿಕ್ಕಮಗಳೂರು : ಚಾಮರಾಜನಗರ ಆಕ್ಸಿಜನ್ ದುರಂತದಲ್ಲಿ ಮೃತಪಟ್ಟರ ಕುಟಂಬಸ್ಥರೊಂದಿಗೆ ರಾಹುಲ್ ಗಾಂಧಿ ಅವರು ಸಂವಾದದ ವೇಳೆ ಡಿ.ಕೆ. ಶಿವಕುಮಾರ್ ಕಣ್ಣೀರು ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕ ಸಿ.ಟಿ. ರವಿ ವ್ಯಂಗ್ಯವಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ. ಶಿವಕುಮಾರ್ ಒಳಗಡೆ ಇಂತಹ ಕಲಾವಿದ ಇದ್ದಾನೆಂದು ನನಗೆ ಗೊತ್ತಿರಲಿಲ್ಲ. ಡಿ.ಕೆ. ಶಿವಕುಮಾರ್ ನಟನಾಗಿದ್ದರೆ ಆಸ್ಕರ್ ಪ್ರಶಸ್ತಿ ಪಡೆದುಕೊಳ್ಳಬಹುದಾಗಿತ್ತು. ತುಂಬಾ ಚೆನ್ನಾಗಿ ನಟನೆ ಮಾಡುತ್ತಾರೆ. ಗ್ಲಿಸರಿನ್ ಹಾಕದೇ ಡಿ.ಕೆ. ಶಿವಕುಮಾರ್ ಪ್ರಯತ್ನಿಸಿರುವುದು ಒಳ್ಳೆಯದು ಎಂದು ಲೇವಡಿ ಮಾಡಿದ್ದಾರೆ.
ಚಾಮರಾಜನಗರ ಆಕ್ಸಿಜನ್ ದುರಂತದಲ್ಲಿ ಮೃತಪಟ್ಟರ ಕುಟಂಬಸ್ಥರೊಂದಿಗೆ ರಾಹುಲ್ ಗಾಂಧಿ ಸಂವಾದ ನಡೆಸಿದ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಣ್ಣೀರು ಹಾಕಿದ್ದರು.
ಕೋವಿಡ್ ಸಂದರ್ಭದಲ್ಲಿ ನಡೆದ ಆಕ್ಸಿಜನ್ ದುರಂತದಲ್ಲಿ 39 ಮಂದಿ ಮೃತಪಟ್ಟಿದ್ದರು. ಮೃತರ ಕುಟುಂಬಸ್ಥರ ಜೊತೆಗೆ ರಾಹುಲ್ ಶುಕ್ರವಾರ ಸಂವಾದ ನಡೆಸಿದರು. ರಾಹುಲ್ ಸಂವಾದದ ವೇಳೆ ಡಿ.ಕೆ ಶಿವಕುಮಾರ್, ಸಿದ್ದರಾಮಯ್ಯ ಸೇರಿದಂತೆ ಹಲವರು ಉಪಸ್ಥಿತರಿದ್ದರು.