ಬೆಂಗಳೂರು : ರಾಜ್ಯದಲ್ಲಿ ಪಿಎಫ್ ಐ ಸಂಘಟನೆ ನಿಷೇಧ ಮಾಡುವ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ಪಿಎಫ್ ಐ ಸಂಘಟನೆ ನಿಷೇಧ ಮಾಡುವಂತೆ ಕುರಿತಂತೆ ಈಗಾಗಲೇ ಪ್ರಕ್ರಿಯೆ ಪ್ರಾರಂಭವಾಗಿದೆ ಎಂದು ಹೇಳಿದ್ದಾರೆ.
BREAKING NEWS : ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಕೇಸ್ : ಈವರೆಗೆ 21 ಶಂಕಿತರು ಪೊಲೀಸ್ ವಶಕ್ಕೆ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಸೂಕ್ಷ್ಮ ವಿಚಾರವಾಗಿರುವುದರಿಂದ ಸೂಕ್ತವಾದ ರೀತಿಯಲ್ಲಿ ನಿಷೇಧವಾಗಬೇಕಿರುವುದರಿಂದ ಎಲ್ಲಾ ರಾಜ್ಯಗಳ ಅಭಿಪ್ರಾಯ ಪಡೆದುಕೊಂಡು ಮಾಡುತ್ತೇವೆ. ಈಗಾಗಲೇ ಪ್ರಕ್ರಿಯೆ ಪ್ರಾರಂಭವಾಗಿದೆ. ಬೇರೆ ಬೇರೆ ರಾಜ್ಯಗಳಲ್ಲಿರುವ ಮತ್ತು ಕೇಂದ್ರ ಸರ್ಕಾರದ ಕಾನೂನನ್ನು ಹಿರಿಯ ಅಧಿಕಾರಿಗಳ ಜೊತೆ ಚರ್ಚೆ ಮಾಡಿ ಪರಿಣಿತರ ಅಭಿಪ್ರಾಯ ಪಡೆದು ಸಂಪೂರ್ಣ ಸಶಜ್ಜಿತ ತಂಡವನ್ನು ತಯಾರು ಮಾಡುತ್ತೇವೆ ಎಂದರು.
BIGG NEWS : ಪ್ರವೀಣ್ ಹತ್ಯೆ ಪ್ರಕರಣವನ್ನು `NIA’ ಗೆ ನೀಡಬೇಕು : ಪ್ರವೀಣ್ ಪತ್ನಿ ನೂತನಾ ಆಗ್ರಹ
ಇನ್ನು ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ನನ್ನ ಮನಸ್ಸಿಗೆ ತುಂಬಾ ನೋವು ಉಂಟಾಗಿದೆ. ಇದರಿಂದ ನನ್ನ ಮನಸ್ಸಿಗೆ ಶಾಂತಿ ಅನ್ನೋದೆ ಇರಲಿಲ್ಲ. ಅವರ ಕುಟುಂಬಸ್ಥರ ನೋವು ನೋಡಿ ನನಗೆ ಬಹಳ ಸಂಕಷ್ಟವಾಯಿತು.ಈ ಸಂದರ್ಭದಲ್ಲಿ ಯಾವುದೇ ಕಾರ್ಯಕ್ರಮ ನಡೆಸುವುದು ಸೂಕ್ತ ಅಲ್ಲ ಎಂಬ ಕಾರಣಕ್ಕಾಗಿ ಜನೋತ್ಸವ ಕಾರ್ಯಕ್ರಮವನ್ನು ರದ್ದು ಗೊಳಿಸಲಾಗಿದೆ ಎಂದರು.