ಶಿವಮೊಗ್ಗ : ಎಬಿವಿಪಿ ಕಾರ್ಯಕರ್ತರ ನೋವು ಏನೆಂಬುದು ನಮಗೆ ಅರ್ಥವಾಗುತ್ತದೆ. ರಾಜ್ಯ ಸರ್ಕಾರ ಪ್ರವೀಣ್ ಹತ್ಯೆ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಬದ್ಧವಾಗಿದೆ ಎಂದು ಗೃಹ ಸಚಿವ ಅರಗಜ್ಞಾನೇಂದ್ರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಬಿವಿಪಿ ಕಾರ್ಯಕರ್ತರ ನೋವು, ಆಕ್ರೋಶವನ್ನು ನಾವು ಅರ್ಥಮಾಡಿಕೊಳ್ಳಬಲ್ಲೆವು. ರಾಜ್ಯದಲ್ಲಿ ಸಾವು,ನೋವುಗಳ ನಡೆದಾಗ ಸರ್ಕಾರವನ್ನು ಎಚ್ಚರಗೊಳಿಸುವುದು ಸಹಜ, ಮತಾಂಧ,ದುಷ್ಟಶಕ್ತಿಗಳ ವಿರುದ್ಧ ನಾವು ಕಠಿಣ ಕ್ರಮ ಕೈಗೊಂಡಿದ್ದೇವೆ ಎಂದಿದ್ದಾರೆ.
ಇನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ನನಗೆ ರಾಜೀನಾಮೆ ಕೇಳುತ್ತಿದ್ದಾರೆ. ಅವರ ಅವಧಿಯಲ್ಲಿ 2 ಸಾವಿರ ಕೇಸ್ ಗಳನ್ನು ವಾಪಸ್ ಪಡೆದಿದ್ದಾರೆ. ಅವರ ಸರ್ಕಾರದಲ್ಲಿ ಮಾಡಿದ್ದನ್ನು ಸರಿಪಡಿಸಲು ಸಮಯಾವಕಾಶಬೇಕು. ನಮ್ಮ ರಾಜೀನಾಮೆ ಬಗ್ಗೆ ಕೇಳುವ ನೈತಿಕತೆ ಸಿದ್ದರಾಮಯ್ಯಗೆ ಇಲ್ಲ ಎಂದು ತಿರುಗೇಟು ನೀಡಿದ್ದಾರೆ.