ಹಾವೇರಿ : ಬೆಂಗಳೂರಿನಲ್ಲಿ ಬ್ಯಾನರ್ ಹರಿದು ಹಾಕಿದ ವಿಚಾರದ ಕುರಿತಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ ನೀಡಿದ್ದು, ಬ್ಯಾನರ್ ಬಗ್ಗೆ ಆಕ್ಷೇಪಣೆ ಇದ್ದರೆ ದೂರು ಸಲ್ಲಿಸಬೇಕು ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬ್ಯಾನರ್ ಬಗ್ಗೆ ಆಕ್ಷೇಪಣೆ ಇದ್ದರೆ ದೂರು ಸಲ್ಲಿಸಬೇಕು. ಯಾರೂ ಸೌಹಾರ್ದತೆ ಹಾಳು ಮಾಡುವ ಕೆಲಸ ಮಾಡಬಾರದು. ಸಾವರ್ಕರ್ ಮತ್ತು ಟಿಪ್ಪು ಸುಲ್ತಾನ್ ನಡುವೆ ಹೋಲಿಕೆ ಸರಿಯಲ್ಲ ಎಂದು ಹೇಳಿದ್ದಾರೆ.
‘ಬಿಜೆಪಿ ನಾಯಕ’ರಿಗೆ ‘ಮಾಜಿ ಪರಿಷತ್ ಸದಸ್ಯ ರಮೇಶ್ ಬಾಬು’ ಬಹಿರಂಗ ಪತ್ರ
ಬಿಜೆಪಿ ಪಕ್ಷ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿಲ್ಲ ಎಂಬ ಕಾಂಗ್ರೆಸ್ ಹೇಳಿಕೆಗೆ ತಿರುಗೇಟು ನೀಡಿದರು. ಕಾಂಗ್ರೆಸ್ ಗೆ ಬಿಜೆಪಿ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ಈಗಿನ ಕಾಂಗ್ರೆಸ್ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿಲ್ಲ. ಗಾಂಧೀಜಿಯವರ ಕಾಂಗ್ರೆಸ್ ಬೇರೆ, ಈಗಿನ ಕಾಂಗ್ರೆಸ್ ಬೇರೆ, ದೇಶದಲ್ಲಿ ಈಗಿರುವುದು ಡೂಪ್ಲಿಕೇಟ್ ಕಾಂಗ್ರೆಸ್, ನಕಲಿ ಗಾಂಧಿವಾದಿಗಳು, ಈಗಿರವುದು ಇಂದಿರಾ ಗಾಂಧಿ ಕಾಂಗ್ರೆಸ್, ಈಗಿನ ಕಾಂಗ್ರೆಸ್ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿಲ್ಲ ಎಂದು ತಿರುಗೇಟು ನೀಡಿದ್ದಾರೆ.