ಬೆಂಗಳೂರು : ಪೈಪೋಟಿಯ ಮೇಲೆ ದೇಶದ ಸಂಪತ್ತನ್ನು ಮಾರಾಟ ಮಾಡುತ್ತಿರುವುದೇ ಡಬಲ್ ಇಂಜಿನ್ ಸರ್ಕಾರಗಳ ಸಾಧನೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ರಾಜ್ಯ ಕಾಂಗ್ರೆಸ್ ಕಿಡಿಕಾರಿದೆ.
BREAKING NEWS : ʻಬೆಂಗಳೂರಿನಲ್ಲಿ ಟೋಯಿಂಗ್ ಅಗತ್ಯವಿದೆʼ : ಪೊಲೀಸ್ ಕಮಿಷನರ್ ಪ್ರತಾಪ್ ರೆಡ್ಡಿ
ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, ಕೇಂದ್ರ, ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಸ್ವರ್ಗವನ್ನೇ ಧರೆಗೆ ಇಳಿಸುತ್ತೇವೆ, ಡಬಲ್ ಇಂಜಿನ್ ನಂತೆ ಕೆಲಸ ಮಾಡುತ್ತೇವೆ ಎಂದು ಹೇಳಿ ಬಿಜೆಪಿ ಅಧಿಕಾರಕ್ಕೆ ಬಂದಿತು. ಆದರೆ ಕೇಂದ್ರದಲ್ಲಿ 8 ವರ್ಷ ಹಾಗೂ ರಾಜ್ಯದಲ್ಲಿ 3 ವರ್ಷ ಬಿಜೆಪಿ ಸರ್ಕಾರಗಳು ಪೈಪೋಟಿಯ ಮೇಲೆ ದೇಶದ ಸಂಪತ್ತನ್ನು ಮಾರಾಟ ಮಾಡುತ್ತಿರುವುದನ್ನು ಬಿಟ್ಟರೆ ಜನಪರವಾದ ಯಾವುದೇ ಕೆಲಸಗಳನ್ನು ಮಾಡುತ್ತಿಲ್ಲ. ಕೇಂದ್ರ ಸರ್ಕಾರ ಭಾರತೀಯ ರೈಲ್ವೆಯನ್ನು ಹಂತ-ಹಂತವಾಗಿ ಖಾಸಗಿಯವರಿಗೆ ಮಾರಾಟ ಮಾಡುತ್ತಿರುವಂತೆ ಇದೀಗ ರಾಜ್ಯದಲ್ಲೂ ಬಿಜೆಪಿ ಸರ್ಕಾರ ಬಿಎಂಟಿಸಿ, ಕೆಎಸ್ಆರ್ಟಿಸಿಯನ್ನು ಮಾರಾಟ ಮಾಡಲು ನಿರ್ಧರಿಸಿದೆ.
BIG NEWS: ‘ಭಾರತ್ ಜುಡೋ ಯಾತ್ರೆ’ ವೇಳೆ ಅಂಗಡಿಯವರಿಗೆ ಹಣಕ್ಕೆ ಬೇಡಿಕೆ ಇಟ್ಟ ಆರೋಪ… ಮೂವರು ʻಕೈʼ ಕಾರ್ಯಕರ್ತರ ಅಮಾನತು
ಬಿಎಂಟಿಸಿ, ಕೆಎಸ್ಆರ್ಟಿಸಿ ಸಾರ್ವಜನಿಕ ಸ್ವತ್ತುಗಳನ್ನಾಗಿ ಮಾಡಿ ಸಾರಿಗೆ ವ್ಯವಸ್ಥೆಯನ್ನು ಜನಸ್ನೇಹಿಯಾಗಿ ಮಾಡಿದ ಹೆಗ್ಗಳಿಕೆ ಕಾಂಗ್ರೆಸ್ ಸರ್ಕಾರಗಳಿಗೆ ಸಲ್ಲುತ್ತದೆ. ಸಾರಿಗೆ ಸಾರ್ವಜನಿಕರ ಕೈಗೆಟುಕುವಂತೆ ಮಾಡುವುದರ ಜೊತೆಗೆ ಗುಣಮಟ್ಟದ ವ್ಯವಸ್ಥೆ ಕಲ್ಪಿಸಿದ ಕಾರಣಕ್ಕಾಗಿ ಬಿಎಂಟಿಸಿ, ಕೆಎಸ್ಆರ್ಟಿಸಿಗಳು ರಾಷ್ಟ್ರೀಯ, ಅಂತರಾಷ್ಟ್ರೀಯ ಮಟ್ಟದಲ್ಲಿ ಹಲವು ಅವಾರ್ಡ್ ಗಳನ್ನು ಪಡೆಯುವಂತಾಯಿತು. ಇದೆಲ್ಲ ಆಗಿದ್ದು ಕಾಂಗ್ರೆಸ್ ಆಡಳಿತದಲ್ಲಿ ಎಂದು ಹೇಳಿದೆ.
ಆದರೆ ಬಿಜೆಪಿ ಸರ್ಕಾರಗಳು ದೇಶದ ಸಾರ್ವಜನಿಕ ಸಂಪತ್ತುಗಳನ್ನು ಖಾಸಗಿಯವರಿಗೆ ಮಾರಾಟ ಮಾಡಿದ್ದನ್ನು ಬಿಟ್ಟರೆ ಸಾರಿಗೆ ವ್ಯವಸ್ಥೆ ಸುಧಾರಣೆಗೆ, ಮತ್ತಷ್ಟು ಜನಸ್ನೇಹಿಯಾಗಿ ಮಾಡಲು ಯಾವುದೇ ಕಾರ್ಯಕ್ರಮಗಳನ್ನು ಹಾಕಿಕೊಳ್ಳಲಿಲ್ಲ. ನಮ್ಮ ತೆರಿಗೆ ಹಣದಲ್ಲಿ ನಿರ್ಮಾಣವಾದ ಸಂಪತ್ತನ್ನು ಮಾರಾಟ ಮಾಡುವುದಕ್ಕಾಗಿಯೇ ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಬಿಜೆಪಿ ಎಂದರೆ ಡಬಲ್ ಇಂಜಿನ್ ಸರ್ಕಾರ ಅಲ್ಲ, ಡಬಲ್ ದುಬಾರಿ ಸರ್ಕಾರ ವಾಗ್ದಾಳಿ ನಡೆಸಿದೆ.