ಬೆಂಗಳೂರು: ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ರಾಷ್ಟ್ರ ಧ್ವಜಕ್ಕಿಂತ ಎತ್ತರದಲ್ಲಿ ಎಬಿವಿಪಿ ಧ್ವಜ ಹಿಡಿದಿದ್ದಾರೆ ಎಂದು ಕಾಂಗ್ರೆಸ್ ಮಾಡಿರುವ ಆರೋಪಕ್ಕೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ರಾಷ್ಟ್ರಧ್ವಜದ ಬಣ್ಣಗಳೇ ತಿಳಿಯದವರು, ದಿಕ್ಕು ತಪ್ಪಿಸಲೆಂದೇ ಒಂದು ಚಿತ್ರವನ್ನು ಬಳಸಿಕೊಂಡು ಸುಳ್ಳಿನ ಬೇಳೆ ಬೇಯಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಹತಾಶೆಯಿಂದ ಸುಳ್ಳು ಹೇಳುವುದನ್ನೆ ಅವರು ಅಜೆಂಡಾ ಮಾಡಿಕೊಂಡಿರುವುದು ಸ್ಪಷ್ಟವಾಗಿದೆ. ಆದರೆ, ಈ ನೈಜ ಚಿತ್ರಗಳು ಅವರ ಹಸಿ ಹಸಿ ಸುಳ್ಳುಗಳನ್ನು ಬಯಲು ಮಾಡುತ್ತವೆ ಎಂದು ಹೇಳಿದ್ದಾರೆ.
ತಿಪಟೂರಿನಲ್ಲಿ ಬಿ.ಸಿ.ನಾಗೇಶ್ ತಿರಂಗಾ ಯಾತ್ರೆ ನಡೆಸುವ ಸಂದರ್ಭದಲ್ಲಿ ರಾಷ್ಟ್ರಧ್ವಜಕ್ಕೆ ಅಪಮಾನ ಎಸಗಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿತ್ತು.
ರಾಷ್ಟ್ರಧ್ವಜದ ಬಣ್ಣಗಳೇ ತಿಳಿಯದವರು, ದಿಕ್ಕು ತಪ್ಪಿಸಲೆಂದೇ ಒಂದು ಚಿತ್ರವನ್ನು ಬಳಸಿಕೊಂಡು ಸುಳ್ಳಿನ ಬೇಳೆ ಬೇಯಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ.
ಹತಾಶೆಯಿಂದ ಸುಳ್ಳು ಹೇಳುವುದನ್ನೆ ಅವರು ಅಜೆಂಡಾ ಮಾಡಿಕೊಂಡಿರುವುದು ಸ್ಪಷ್ಟವಾಗಿದೆ.
ಆದರೆ, ಈ ನೈಜ ಚಿತ್ರಗಳು ಅವರ ಹಸಿ ಹಸಿ ಸುಳ್ಳುಗಳನ್ನು ಬಯಲು ಮಾಡುತ್ತವೆ. pic.twitter.com/6Yw49UZxum
— B.C Nagesh (@BCNagesh_bjp) August 11, 2022
BIG NEWS: ತ್ರಿವರ್ಣ ಧ್ವಜಕ್ಕೆ ಅವಮಾನ : ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ವಿರುದ್ದ ದೂರು ದಾಖಲು