ಧಾರವಾಡ : ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಗೆ ವಂತಿಕೆ ಪಾವತಿಸುವ ಸಂಘಟಿತ ಕಾರ್ಮಿಕರ ಮಕ್ಕಳಿಂದ ಪ್ರೌಢಶಾಲೆಯಿಂದ ಸ್ನಾತಕೋತ್ತರ ಪದವಿಯವರೆಗೆ ಹಾಗೂ ವೈದ್ಯಕೀಯ, ಇಂಜಿನೀಯರಿಂಗ್‍ನಲ್ಲಿ ವ್ಯಾಸಂಗ ಮಾಡುತ್ತಿರುವವರಿಗೆ 2022-23ನೇ ಸಾಲಿಗೆ ಶೈಕ್ಷಣಿಕ ಪ್ರೋತ್ಸಾಹ ಧನ ಸಹಾಯಕ್ಕೆ ಆನ್‍ಲೈನ್ ಮುಖಾಂತರ ಅರ್ಜಿಯನ್ನು ಆಹ್ವಾನಿಸಲಾಗಿದೆ.

 ಶೈಕ್ಷಣಿಕ ಪ್ರೋತ್ಸಾಹ ಧನ ಸಹಾಯ ಬಯಸುವ ವಿದ್ಯಾರ್ಥಿಗಳು ಆನ್‍ಲೈನ್ ಮುಖಾಂತರ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯ ವೆಬ್‍ಸೈಟ್‍ನಲ್ಲಿ www.klwbapps.karnataka.gov.in        ಡಿಸೆಂಬರ್ 31 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಕಾರ್ಮಿಕರ ಮಾಸಿಕ ವೇತನ ರೂ.35,000/- ಗಿಂತ ಮೀರಿರಬಾರದು. ಒಂದು ಕುಟುಂಬದಲ್ಲಿ ಒಬ್ಬ ವಿದ್ಯಾರ್ಥಿಗೆ ಮಾತ್ರ ಈ ಸೌಲಭ್ಯ ನೀಡಲಾಗುವುದು. ವಿದ್ಯಾರ್ಥಿಯು ಹಿಂದಿನ ವರ್ಷದಲ್ಲಿ ಸಾಮಾನ್ಯ ವರ್ಗ ಶೇ.50, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರಿಗೆ ಶೇ.45 ರಷ್ಟು ಅಂಕ ಪಡೆದು ತೇರ್ಗಡೆಯಾಗಿರಬೇಕು.

 ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ, ಕಾರ್ಮಿಕ ಕಲ್ಯಾಣ ಭವನ, ನಂ.48, 1ನೇ ಹಾಗೂ 2ನೇ ಮಹಡಿ, ಮತ್ತೀಕೆರೆ ಮುಖ್ಯರಸ್ತೆ, ಯಶವಂತಪುರ, ಬೆಂಗಳೂರು-560022 ಇಲ್ಲಿ ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ: 080-23475188, 8277291175, 8277120505, 9141585402, 9141602560 ಮೂಲಕ ಸಂಪರ್ಕಿಸಬಹುದೆಂದು ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯ ಕಲ್ಯಾಣ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share.
Exit mobile version