ಬೆಂಗಳೂರು : ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಮೊದಲ ಒಂದು ವರ್ಷ ಪೂರ್ಣವಾಗುತ್ತಿದ್ದು, ಆ ಬಳಿಕ ಪಕ್ಷದ ವರಿಷ್ಠರ ಸೂಚನೆ ಆಧರಿಸಿ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇದೆ.
Good News : ರೈತ ಸಮುದಾಯಕ್ಕೆ ಸಿಹಿಸುದ್ದಿ : ಅಕ್ಟೋಬರ್ ನಲ್ಲಿ `ಯಶಸ್ವಿನಿ ಯೋಜನೆ’ ಮರು ಜಾರಿ
ಜುಲೈ 28 ಕಕ್ಎಕ ಬೊಮ್ಮಾಯಿ ಸರ್ಕಾರ 1 ವರ್ಷ ಪೂರ್ಣವಾಗುತ್ತಿದ್ದು, ಆಗಸ್ಟ್ ಮೊದಲ ಅಥವಾ ಎರಡನೇ ವಾರದಲ್ಲಿ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇದ್ದು, ಆರೋಪಗಳಿಮದ ಮುಕ್ತಿ ಪಡೆದಿರುವ ಕೆ.ಎಸ್. ಈಶ್ವರಪ್ಪ ಹಾಗೂ ರಮೇಶ್ ಜಾರಕಿಹೊಳಿ ಅವರು ಮತ್ತೆ ಸಂಪುಟ ಸೇರುವ ಸಾಧ್ಯತೆ ಇದೆ ಎನ್ನಲಾಗಿದೆ.
ಇನ್ನು ಮೈಸೂರು ಭಾಗದಿಂದ ಒಕ್ಕಲಿಗ ಸಮುದಾಯದ ಸಿ.ಪಿ. ಯೋಗೇಶ್ವರ್ ಹಾಗೂ ಕಲ್ಯಾಣ ಕರ್ನಾಟಕ ಭಾಗದ ಲಿಂಗಾಯತ ಸಮುದಾಯದ ದತ್ತಾತ್ರೇಯ ಪಾಟೀಲ್ ರೇವೂರು ಅವರನ್ನೂ ಸಂಪುಟಕ್ಕೆ ಸೇರಿಸಿಕೊಳ್ಳುವ ಬಗ್ಗೆ ಪ್ರಸ್ತಾಪವಿದೆ ಎಂದು ಹೇಳಲಾಗುತ್ತಿದೆ.