ಹಾಸನ: ರಾಜ್ಯದಲ್ಲಿ ಹೆಲ್ತ್ ಅಂಡ್ ವೆಲ್ನೆಸ್ ಕೇಂದ್ರಗಳ ಮೂಲಕ ರಕ್ತದೊತ್ತಡ, ಮಧುಮೇಹ, ಕ್ಯಾನ್ಸ್ ರೋಗಿಗಳ ಪತ್ತೆಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಅಸಾಂಕ್ರಾಮಿಕ ರೋಗ ಆರಂಭಿಕ ಹಂತದಲ್ಲೇ ಪತ್ತೆ ಕಾರ್ಯ ಮಾಡಲಾಗುತ್ತದೆ. ಅಲ್ಲದೇ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಸರ್ಕಾರದಿಂದಲೇ ಕಣ್ಣಿನ ತಪಾಸಣೆ ( Eye check-up ) ನಡೆಸಲಾಗುತ್ತದೆ ಎಂಬುದಾಗಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ (Minister Dr K Sudhakar ) ತಿಳಿಸಿದ್ದಾರೆ.
BIG NEWS: ನ್ಯೂಯಾರ್ಕ್, ಸಿಂಗಾಪುರ್ ವಿಶ್ವದ ಅತ್ಯಂತ ದುಬಾರಿ ನಗರಗಳು: ಸಮೀಕ್ಷೆ | World’s Most Expensive Cities
ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಜನಸಂಖ್ಯೆಗೆ ಅನುಗುಣವಾಗಿ ಆರೋಗ್ಯ ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ. ನಗರ ಕೇಂದ್ರಿತವಾಗಿ 100 ನಮ್ಮ ಕ್ಲಿನಿಕ್ ( Namma Clinic ) ಆರಂಭಿಸಲಾಗುತ್ತದೆ. ಹಾಸನದಲ್ಲಿ ಐದು ನಮ್ಮ ಕ್ಲಿನಿಕ್ ಓಪನ್ ಆಗಲಿದೆ. ಡಿಸೆಂಬರ್ 14ರಂದು ಸಿಎಂ ಬಸವರಾಜ ಬೊಮ್ಮಾಯಿಯವರೇ ಈ ಕ್ಲಿನಿಕ್ ಗಳಿಗೆ ಚಾಲನೆ ನೀಡಲಿದ್ದಾರೆ ಎಂದರು.
ಹಾಸನದಲ್ಲಿ ಮಾರ್ಚ್ ತಿಂಗಳಇನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಾರ್ಯಾರಂಭ ಮಾಡಲಿದೆ. ಜಿಲ್ಲೆಯಲ್ಲಿ ಖಾಲಿ ಇದ್ದಂತ 339 ವೈದ್ಯರ ಹುದ್ದೆಗಳ ಪೈಕಿ 269 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗಿದೆ. 18 ತಜ್ಞ ವೈದ್ಯರ ಹುದ್ದೆ ಮಾತ್ರ ಖಾಲಿ ಇದ್ದಾವೆ ಎಂದು ಹೇಳಿದರು.
ರಾಜ್ಯದಲ್ಲಿ ಹೆಲ್ತ್ ಅಂಡ್ ವೆಲ್ ನೆಸ್ ಸೆಂಟರ್ ಗಳ ಮೂಲಕ ರೋಗಿಗಗಳ ಪತ್ತೆಗೆ ಕ್ರಮ ಕೈಗೊಳ್ಳಲಾಗುತ್ತಿದೆ. ರಕ್ತದೊತ್ತಡ, ಮಧುಮೇಹ, ಕ್ಯಾನ್ಸರ್ ರೋಗಿಗಳ ಪತ್ತೆಗೆ ಕ್ರಮವಹಿಸಲಾಗುತ್ತಿದೆ. ಈ ಮೂಲಕ ಅಸಾಂಕ್ರಾಮಿಕ ರೋಗ ಆರಂಭಿಕ ಹಂತದಲ್ಲೇ ಪತ್ತೆ ಮಾಡಿ, ಸೂಕ್ತ ಚಿಕಿತ್ಸೆಯನ್ನು ನೀಡಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.
ರಾಜ್ಯದಲ್ಲಿ ಇ-ಸ್ಕ್ರೀನಿಂಗ್ ಶೇ.70ರಷ್ಟು ಆಗಿದೆ. 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಸರ್ಕಾರದಿಂದ ಕಣ್ಣಿನ ತಪಾಸಣೆ ಮಾಡಲಾಗುತ್ತದೆ. ಈ ಬಗ್ಗೆ ಸ್ವತಹ ಸಿಎಂ ಬಸವರಾಜ ಬೊಮ್ಮಾಯಿಯವರೇ ಮುತುವರ್ಜಿ ವಹಿಸಿದ್ದಾರೆ. ಸುಮಾರು 330 ಕೋಟಿ ವೆಚ್ಚದ ಮಹತ್ವದ ಯೋಜನೆ ಜಾರಿ ಮಾಡುತ್ತಿದ್ದೇವೆ ಎಂದು ಹೇಳಿದರು.
ಆರೋಗ್ಯ ಕರ್ನಾಟಕ ಯೋಜನೆಯಡಿ ಕಾರ್ಡ್ ವಿತರಿಸಲಾಗುತ್ತಿದೆ. ಆಯುಷ್ಮಾನ್ ಆರೋಗ್ಯ ಕರ್ನಾಟಕ ಕಾರ್ಡ್ ವಿತರಣೆ ಮಾಡಲಾಗುತ್ತಿದೆ. ಜನವರಿ ವೇಳೆಗೆ 5 ಕೋಟಿ ಕಾರ್ಡ್ ವಿತರಣೆ ಮಾಡಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.