ಬೆಂಗಳೂರು : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರುರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಪ್ರಕರಣ ಸಂಬಂಧ ಗೃಹ ಸಚಿವ ಅರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದು, ಪ್ರವೀಣ್ ನೆಟ್ಟಾರು ಹತ್ಯೆ ಹಿಂದೆ ಮತಾಂಧ ಶಕ್ತಿಗಳ ಕೈವಾಡ ಇದೆ ಎಂದು ಹೇಳಿದ್ದಾರೆ.
BREAKING NEWS: ಬಿಜೆಪಿ ಮುಖಂಡ ಪ್ರವೀಣ್ ಹತ್ಯೆ ಹಿಂದೆ PFI ಕೈವಾಡವಿದೆ; ರಾಷ್ಟ್ರೀಯ ತನಿಖಾ ದಳದಿಂದ ತನಿಖೆಗೆ ಆಗ್ರಹ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಮಾಯಕ ವ್ಯಕ್ತಿಯ ಮೇಲೆ ಕಿಡಿಗೇಡಿಗಳು ದಾಳಿ ಮಾಡಿದ್ದಾರೆ. ಆತ ರಾತ್ರಿ ಅಂಗಡಿ ಕ್ಲೋಸ್ ಮಾಡಿಕೊಂಡು ಹೋಗುವಾಗ ಮಾರಾಣಾಂತಿಕ ಹಲ್ಲೇ ನಡೆಸಿದ್ದಾರೆ. ಅವರ ನಡುವೆ ಏನೇ ದ್ವೇಷವಿದ್ದರೂ ಕೂಡ ಈ ರೀತಿ ಕೊಲೆ ಮಾಡಬಾರದು ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಪ್ರವೀಣ್ ಹತ್ಯೆ ಹಿಂದೆ ಮತಾಂಧರ ಕೈವಾಡವಿರುವ ಅನುಮಾನ ಇದೆ. ಹತ್ಯೆ ಆರೋಪಿಗಳನ್ನು ಪೊಲೀಸರು ಈಗಾಗಲೇ ಬೆನ್ನು ಹತ್ತಿದ್ದಾರೆ. ಕೇರಳ ಗಡಿ ಭಾಗದಲ್ಲಿರುವ ಗ್ರಾಮದಲ್ಲಿ ಹತ್ಯೆ ನಡೆದಿದೆ. ಆದಷ್ಟು ಬೇಗ ಆರೋಪಿಗಳನ್ನು ಬಂಧಿಸುತ್ತೇವೆ. ಕರಾವಳಿಯಲ್ಲಿ ಹಿಂದಿನ ವರ್ಷ ಸಾಕಷ್ಟು ಇಂತಹ ಘಟನೆಗಳು ನಡೆಯುತ್ತಿತ್ತು. ಆದರೆ ಇತ್ತೀಚೆಗೆ ಇಂತಹ ಘಟನೆಗಳು ನಡೆದಿರಲಿಲ್ಲ. ಇದೀಗ ಪ್ರವೀಣ್ ಕೊಲೆ ಮಾಡಿರೋದು ಬೇಸರ ತಂದಿದೆ ಎಂದಿದ್ದಾರೆ.
ಬೆಳ್ಳಾರೆಯ ಮೇಲಿನ ಪೇಟೆಯಲ್ಲಿ ಚಿಕನ್ ಅಂಗಡಿ ನಡೆಸುತ್ತಿದ್ದ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರುನನ್ನು ದುಷ್ಕರ್ಮಿಗಳು ಹತ್ಯೆ ಮಾಡಿ ಪರಾರಿಯಾಗಿದ್ದಾರೆ.