ಬಳ್ಳಾರಿ : ರಾಯಚೂರಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ 14ನೇ ಸಂಸ್ಥಾಪನಾ ದಿನಾಚರಣೆಯನ್ನು ನ.22ರಂದು ಮುಖ್ಯ ಆವರಣದಲ್ಲಿ ಆಯೋಜಿಸಲಾಗುತ್ತಿದ್ದು, ಕಲ್ಯಾಣ ಕರ್ನಾಟಕ ಭಾಗದ ಅತ್ಯುತ್ತಮ ಸಾಧನೆಗೈದ ಪ್ರಗತಿಪರ ಕೃಷಿಕರಿಗೆ ಕೃಷಿ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು. ಈ ಹಿನ್ನೆಲೆಯಲ್ಲಿ 2021-22ನೇ ಸಾಲಿಗೆ ಕಲ್ಯಾಣ ಕರ್ನಾಟಕ ಭಾಗದ ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
SHOCKING NEWS: ಆರ್ಥಿಕ ಲಾಭಕ್ಕಾಗಿ ಮತ್ತೊಂದು ನರಬಲಿ: ನವರಾತ್ರಿಯ ಮೊದಲ ದಿನವೇ 14 ವರ್ಷದ ಮಗಳನ್ನ ಬಲಿಕೊಟ್ಟ ಕುಟುಂಬ
ಅರ್ಜಿ ನಮೂನೆಯನ್ನು ಆಯಾ ಜಿಲ್ಲೆಗಳ ಕೃಷಿ ವಿಜ್ಞಾನ ಕೇಂದ್ರ, ರಾಯಚೂರಿನ ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ ಹಾಗೂ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಪಡೆಯಬಹುದು ಎಂದು ರಾಯಚೂರಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ವಿಸ್ತರಣಾ ನಿರ್ದೇಶಕರು ತಿಳಿಸಿದ್ದಾರೆ.
ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಅ.31ರಂದು ಕೊನೆಯ ದಿನಾಂಕ ಆಗಿರುತ್ತದೆ. ಸಂಬಂಧಿತ ಅರ್ಜಿಗಳು ವಿಶ್ವವಿದ್ಯಾಲಯದ ವೆಬ್ ಸೈಟ್ www.uasraichur.edu.in ನಲ್ಲಿ ಸಹ ಲಭ್ಯವಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಹಿರಿಯ ವಿಜ್ಞಾನಿ ಹಾಗೂ ಮುಖ್ಯಸ್ಥರು, ಕೃಷಿ ವಿಜ್ಞಾನ ಕೇಂದ್ರ, ರಾಯಚೂರು / ಬೀದರ / ಕಲಬುರಗಿ / ರದ್ದೇವಾಡಗಿ / ಗಂಗಾವತಿ / ಕವಡಿಮಟ್ಟಿ / ಹಗರಿ ಮತ್ತು ಮುಖ್ಯಸ್ಥರು, ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ, ಭೀಮರಾಯನಗುಡಿ/ ಲಿಂಗಸೂಗೂರು / ಕೊಪ್ಪಳ /ನಾಲವಾರ / ದೇವದುರ್ಗ / ಹೂವಿನಹಡಗಲಿ ಇವರನ್ನು ಸಂಪರ್ಕಿಸಬಹುದು ಅಥವಾ ದೂ. 9480696314/315/316/317/318/319/334/335/336 ಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.