ಮಡಿಕೇರಿ : ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISANಯೋಜನೆಯಡಿ ರೈತರ ಆದಾಯ ವೃದ್ಧಿಸಲು ಜಿಲ್ಲೆಯ ಎಲ್ಲಾ ರೈತ ಕುಟುಂಬಗಳಿಗೆ ಪ್ರತಿ ವರ್ಷ 6 ಸಾವಿರ ರೂ.ಗಳನ್ನು ಪ್ರತಿ 4 ತಿಂಗಳಿಗೊಮ್ಮೆ ಒಟ್ಟು 3 ಸಮಾನ ಕಂತುಗಳಲ್ಲಿ ಹಾಗೂ ರಾಜ್ಯ ಸರ್ಕಾರವು ಹೆಚ್ಚುವರಿಯಾಗಿ 2 ಕಂತುಗಳಲ್ಲಿ ವರ್ಷಕ್ಕೆ 4 ಸಾವಿರ ರೂ. ಗಳ ಆರ್ಥಿಕ ನೆರವನ್ನು ರೈತರ ಖಾತೆಗೆ ಜಮೆ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ.
GOOD NEWS: ಗೌರಿ-ಗಣೇಶ ಹಬ್ಬಕ್ಕೆ ಊರಿಗೆ ಹೋಗೋ ಜನರಿಗೆ KSRTC ಕಡೆಯಿಂದ ಭರ್ಜರಿ ಡಿಸ್ಕೌಂಟ್
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು ಜಿಲ್ಲೆಯಲ್ಲಿ ಸುಮಾರು 50,458 ರೈತರು ನೋಂದಣಿಯಾಗಿದ್ದು, 46,744 ರೈತರ ಆಧಾರ್ ಪ್ರಮಾಣೀಕೃತಗೊಂಡಿದೆ. ಇಲ್ಲಿಯವರೆಗೆ 20,995 ಫಲಾನುಭವಿಗಳ ಇ-ಕೆವೈಸಿ ಆಗಿದ್ದು, 25,749 ಫಲಾನುಭವಿಗಳ ಇ-ಕೆವೈಸಿ ಮಾಡಿಸಿಕೊಳ್ಳಲು ಬಾಕಿ ಇದ್ದು, ಆದಷ್ಟು ಶೀಘ್ರ ಇಕೆವೈಸಿ ಮಾಡುವಂತೆ ಜಿಲ್ಲಾಧಿಕಾರಿ ಅವರು ಕೋರಿದರು.
ಮುಂದಿನ ದಿನಗಳಲ್ಲಿ ಆರ್ಥಿಕ ನೆರವು ಅರ್ಹ ರೈತರ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆಯಾಗಬೇಕಾದರೆ e-KYC ಮಾಡಿಸುವುದು ಅವಶ್ಯಕವಾಗಿದೆ. ಈಗಾಗಲೇ ನೇರ ಆರ್ಥಿಕ ನೆರವು ವರ್ಗಾವಣೆ ಚಾಲ್ತಿಯಲ್ಲಿದೆ. ಈ ಯೋಜನೆಯ ನೆರವು ಅರ್ಹ ಫಲಾನುಭವಿಗಳಿಗೆ ದೊರಕುತ್ತಿರುವುದನ್ನು ಖಾತ್ರಿ ಪಡಿಸಿಕೊಳ್ಳಲು e-ಏಙಅ ಮಾಡುವುದು ಅತ್ಯಂತ ಅವಶ್ಯಕವಾಗಿದೆ ಎಂದರು.
ಇ-ಕೆವೈಸಿಯನ್ನು ಎರಡು ವಿಧಾನಗಳಲ್ಲಿ ಕೈಗೊಳ್ಳಬಹುದಾಗಿದ್ದು, ರೈತರು http://pmkisan.gov.in ಪೋರ್ಟಲ್ನ Farmers Corner ನ e-ಏಙಅ ಅವಕಾಶದಡಿ ರೈತನ (ಈಗಾಗಲೇ ಪಿಎಂಕಿಸಾನ್ ಯೋಜನೆಯಡಿ ಫಲಾನುಭವಿಗಳಾಗಿರುವ ಪ್ರತಿಯೊಬ್ಬ) ಆಧಾರ್ ಸಂಖ್ಯೆಯನ್ನು ನಂತರ ಆಧಾರ್ ಸಂಖ್ಯೆಯೊಂದಿಗೆ ನೋಂದಣಿಯಾಗಿರುವ ಮೊಬೈಲ್ ಸಂಖ್ಯೆಯನ್ನು ದಾಖಲಿಸಬೇಕು.
ನಂತರ ಮೊಬೈಲ್ ಗೆ ಔಖಿP ಯು ರವಾನೆಯಾಗುತ್ತದೆ. ಹೀಗೆ ಸ್ವೀಕರಿಸಿದ ಒಟಿಪಿ ಯನ್ನು ಪೋರ್ಟಲ್ನಲ್ಲಿ ದಾಖಲಿಸಿ SUBMIT FOR AUTH” ಎಂಬ ಬಟನ್ ಒತ್ತಬೇಕು. ಆಗ ತಂತ್ರಾಂಶ ಆಧಾರಿತ ಪರಿಶೀಲನೆ ನಡೆದು e-ಏಙಅ is “suಛಿಛಿessಜಿuಟಟಥಿ submiಣಣeಜ” ಎಂಬ ವಾಕ್ಯವು ಗೋಚರಿಸುತ್ತದೆ. ಹೀಗೆ ಮೊಬೈಲ್ ಔಖಿP ಆಧಾರಿತವಾಗಿ ಫಲಾನುಭವಿಯು ಖುದ್ದಾಗಿ ಇ-ಕೆವೈಸಿ ಮಾಡಬಹುದಾಗಿದೆ. (ಈಗಾಗಲೇ e-ಏಙಅ ಆಗಿದ್ದರೆ.e-KYC already done ಎಂಬ ಮಾಹಿತಿ ಗೋಚರಿಸುತ್ತದೆ).
ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶಬನಾ ಎಂ.ಷೇಖ್ ಅವರು ಮಾಹಿತಿ ನೀಡಿ ಯಾವ ಫಲಾನುಭವಿಯು ಮೊಬೈಲ್ ಸಂಖ್ಯೆ ಆಧಾರ್ ಸಂಖ್ಯೆಯೊಂದಿಗೆ ಜೋಡಣೆಯಾಗಿರುವುದಿಲ್ಲವೋ ಅಥವಾ ಯಾರ ಮೊಬೈಲ್ ಸಂಖ್ಯೆಗೆ e-ಏಙಅ ಗಾಗಿ ಕಳುಹಿಸಿದ ಔಖಿP ಸ್ವೀಕೃತವಾಗುದಿಲ್ಲವೋ ಅವರು ಅSಅ (ನಾಗರಿಕ ಸೇವಾ ಕೇಂದ್ರಗಳಿಗೆ) ಗೆ ತೆರಳಿ ಅಲ್ಲಿ ಬಯೋಮೆಟ್ರಿಕ್ ಆಧಾರಿತವಾಗಿ ಇ-ಕೆವೈಸಿ ಮಾಡಬಹುದಾಗಿದೆ. ಅಲ್ಲಿ ಕೈಬೆರಳಿನ ಗುರುತು ಆಧಾರದ ಮೇಲೆ ಇ-ಕೆವೈಸಿ ಮಾಡಬಹುದಾಗಿದೆ ಎಂದು ಜಿಲ್ಲಾಧಿಕಾರಿ ಅವರು ವಿವರಿಸಿದರು.
ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರಾದ ನಾರಾಯಣ ರೆಡ್ಡಿ ಅವರು ಮಾತನಾಡಿ ಈ ಯೋಜನೆಯ ಪ್ರತಿ ಫಲಾನುಭವಿ ರೈತರು, ಕೇಂದ್ರ ಸರ್ಕಾರವು ಮುಂದಿನ ಕಂತಿನಲ್ಲಿ ನೀಡುವ ಆರ್ಥಿಕ ನೆರವು ಪಡೆಯಲು 31 ನೇ ಆಗಸ್ಟ್ 2022 ರೊಳಗೆ e-ಏಙಅ ಮಾಡಿಸುವುದು ಕಡ್ಡಾಯವಾಗಿದೆ. ಹೆಚ್ಚಿನ ಮಾಹಿತಿಗೆ ರೈತರು ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ನಾಗರಿಕ ಸೇವಾ ಕೇಂದ್ರಗಳು, ಗ್ರಾಮ-ಒನ್ ಕೇಂದ್ರಗಳು ಮತ್ತು ಅಂಚೆ ಕಚೇರಿಗಳನ್ನು ಸಂಪರ್ಕಿಸಬಹುದು ಎಂದರು.