ಹಾವೇರಿ : ಕರ್ನಾಟಕ ಸರ್ಕಾರ ಇ-ಆಡಳಿತ ಮತ್ತು ಕೃಷಿ ಇಲಾಖೆ ಸಹಯೋಗದೊಂದಿಗೆ  2022-23 ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಗೆ ರೈತರ ಆ್ಯಪ್ ಬಿಡುಗಡೆ ಮಾಡಲಾಗಿದೆ. ರೈತರು ಗೂಗಲ್ ಪ್ಲೇಸ್ಟೋರ್‍ನಿಂದ “ಮುಂಗಾರು ರೈತರ ಬೆಳೆ ಸಮೀಕ್ಷೆ 2022-23” ಆ್ಯಪ್ ಡೌನ್‍ಲೋಡ್ ಮಾಡಿ ತಾವು ಬೆಳೆದ ಬೆಳೆ ಮಾಹಿತಿಯೊಂದಿಗೆ ಛಾಯಾಚಿತ್ರವನ್ನು ದಿನಾಂಕ 30-09-2022 ರೊಳಗೆ ಅಪ್‍ಲೋಡ್ ಮಾಡಬೇಕು ಎಂದು ಜಂಟಿ ಕೃಷಿ ನಿರ್ದೇಶಕ ಮಂಜುನಾಥ ಅವರು ತಿಳಿಸಿದ್ದಾರೆ.

BREAKING NEWS: ನೋಯ್ಡಾದಲ್ಲಿ ಕಟ್ಟಡದ ಗೋಡೆ ಕುಸಿದು ನಾಲ್ವರು ಕಾರ್ಮಿಕರು ಸಾವು, 9 ಮಂದಿಗೆ ಗಾಯ | Wall Collapses

  ಈ ಮಾಹಿತಿಯನ್ನು ಬೆಳೆವಿಮೆ, ಬೆಳೆ ನಷ್ಟ ಪರಿಹಾರ, ಬೆಂಬಲ ಬೆಲೆ ಮತ್ತು ಸರ್ಕಾರದ ವಿವಿಧ ಯೋಜನೆಯಡಿ ಸವಲತ್ತುಗಳನ್ನು ಒದಗಿಸಲು RTC  ಯಲ್ಲಿ ಅಳವಡಿಸಲು ಬಳಸಲಾಗುತ್ತದೆ. ಆದ್ದರಿಂದ ರೈತರು ಹೆಚ್ಚಿನ ಆಸಕ್ತಿಯೊಂದಿಗೆ ಬೆಳೆ ಸಮೀಕ್ಷೆಯಲ್ಲಿ ಪಾಲ್ಗೊಂಡು ತಮ್ಮ ಜಮೀನಿನ ಬೆಳೆ ಮಾಹಿತಿಯನ್ನು ರೈತರು ತಾವೇ ಖುದ್ದಾಗಿ ದಾಖಲಿಸಲು ಕೋರಿದೆ.

  ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಆಯಾ ಗ್ರಾಮಗಳಿಗೆ ನಿಯೋಜಿಸಿದ ಖಾಸಗಿ ನಿವಾಸಿಗಳ ಸಹಾಯದೊಂದಿಗೆ ಬೆಳೆ ಮಾಹಿತಿಯನ್ನು ದಾಖಲಿಸಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Share.
Exit mobile version