ಬಾಗಲಕೋಟೆ: : 2019-20 ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ತಿರಸ್ಕøತ ಅರ್ಜಿಗಳಿಗೆ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ.
BIGG NEWS : ರಾಜ್ಯದಲ್ಲಿ ಮತ್ತೆ ಜೆಡಿಎಸ್ ಪಕ್ಷ ಅಧಿಕಾರಕ್ಕೆ : ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ
ಬಾಗಲಕೋಟೆ ತಾಲೂಕಿನ 2019-20ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಹಂಗಾಮಿನಲ್ಲಿ ಒಟ್ಟು 79 ಅರ್ಜಿಗಳು ವಿಮಾ ಸಂಸ್ಥೆಯಿಂದ ಪ್ರಸ್ತಾವನೆಗಳು ತಿರಸ್ಕøತವಾಗಿದ್ದು, ಈ ಮಾಹಿತಿಯನ್ನು ಕೃಷಿ ಮತ್ತು ತೋಟಗಾರಿಕೆ ಇಲಾಖೆಯ ಕಛೇರಿ ಹಾಗೂ ರೈತ ಸಂಪರ್ಕ ಕೇಂದ್ರಗಳ ಸೂಚನಾ ಫಲಕಗಳ ಮೇಲೆ ಅಳವಡಿಸಲಾಗಿದೆ. ಈ ಕುರಿತು ಆಕ್ಷೇಪಣೆಗಳು ಇದ್ದಲ್ಲಿ ಮರು ಪರಿಶೀಲನೆಗೆ ರೈತರು ಪತ್ರಿಕೆಯಲ್ಲಿ ಪ್ರಕಟಣೆಗೊಂಡ 15 ದಿನಗಳೊಳಗಾಗಿ ಬೆಳೆ ವಿಮೆಗೆ ನೋಂದಣಿಯಾಗಿರುವ ಬೆಳೆಯನ್ನು ಬೆಳೆದಿರುವ ಕುರಿತು, ಅಗತ್ಯ ದಾಖಲಾತಿಯೊಂದಿಗೆ ರೈತ ಸಂಪರ್ಕ ಕೇಂದ್ರ ಅಥವಾ ಕೃಷಿ ಮತ್ತು ತೋಟಗಾರಿಕೆ ಇಲಾಖೆಯಲ್ಲಿ ಆಕ್ಷೇಪಣೆಗಳನ್ನು ಸಲ್ಲಿಸುವಂತೆ ಸಹಾಯಕ ಕೃಷಿ ನಿದೇಶಕ ಪಾಂಡಪ್ಪ ಲಮಾಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.