ಬೆಂಗಳೂರು : ಹೊಸಕೋಟೆ ಸಮೀಪದ ಮೇಡಹಳ್ಳಿಯಲ್ಲಿ ಮನೆಯೊಂದರಲ್ಲಿ ಎಲ್ ಪಿಜಿ ಗ್ಯಾಸ್ ಸೋರಿಕೆಯಾಗಿ ಸಂಭವಿಸಿದ ಅಗ್ನಿ ದುರಂತದಲ್ಲಿ ಗಾಯಗೊಂಡಿದ್ದ 8 ಕಾರ್ಮಿಕರ ಪೈಕಿ 7 ಕಾರ್ಮಿಕರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಮೇಡಹಳ್ಳಿಯಲ್ಲಿ ಮಾರ್ಚ್ 26ರಂದು ಮನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಚಿಕಿತ್ಸೆ ಪಡೆಯುತ್ತಿದ್ದ 8 ಕಾರ್ಮಿಕರ ಪೈಕಿ 7 ಕಾರ್ಮಿಕರು ಮೃತಪಟ್ಟಿದ್ದಾರೆ. ಹಾಗೂ ಓರ್ವನ ಸ್ಥಿತಿ ಗಂಭೀರವಾಗಿದೆ. ಸನೋಜ್ ಶರ್ಮಾ ಅಕಾ ಸನೋದ್, ಅಮಿತ್ ಕುಮಾರ್ ಮಂಡಲ್, ಚಂದ್ರ ಪಾಲ್, ತಿಲಕ್ ರಾಮ್, ನೀರಜ್ ಭಾರತಿ, ಲಕ್ಷ್ಮಣ ಮತ್ತು ಸುಮಯಾ ಗುಪ್ತಾ ಮೃತಪಟ್ಟವರು ಎಂದು ಗುರುತಿಸಲಾಗಿದೆ. ನಿಕುನ್ ಅನ್ಸಾರಿ ಎಂಬ ಓರ್ವ ಕಾರ್ಮಿಕ ಮಾತ್ರ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಾರ್ಚ್ 26 ರ ಬೆಳಿಗ್ಗೆ 3.55 ರ ಸುಮಾರಿಗೆ ಅಗ್ನಿ ಅವಘಡ ಸಂಭವಿಸಿದ್ದು, ಗಾಯಗೊಂಡವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಿಸದೆ ಒಬ್ಬರಂತೆ ಒಬ್ಬರು ಸಾವನ್ನಪ್ಪುತ್ತಿದ್ದಾರೆ. ಮೃತ ಕಾರ್ಮಿಕರು ಉತ್ತರ ಪ್ರದೇಶ, ಬಿಹಾರ ಮೂಲದವರಾಗಿದ್ದಾರೆ.