ಬೆಂಗಳೂರು : ಮಾರ್ಚ್ 28 ರಿಂದ ಏಪ್ರಿಲ್ 13 ರವರೆಗೆ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಯಲಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರು ಹೇಳಿದ್ದಾರೆ.
ಮಾರ್ಚ್ 28 ರಿಂದ ಏಪ್ರಿಲ್ 13 ರವರೆಗೆ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಯಲಿದ್ದು, ಪ್ರಥಮ ಪಿಯುಸಿ ವಾರ್ಷಿಕ ಮತ್ತು ಪೂರಕ ಪರೀಕ್ಷೆಗಳನ್ನು ಜಿಲ್ಲಾಮಟ್ಟದಲ್ಲಿ ನಡೆಸುವಂತೆ ಎಲ್ಲಾ ಜಿಲ್ಲೆಗಳ ಉಪನಿರ್ದೇಶಕರಿಗೆ ಶಿಕ್ಷಣ ಇಲಾಖೆ ನಿರ್ದೇಶಕರು ಸೂಚನೆ ನೀಡಿದ್ದಾರೆ.
BIGG NEWS : ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದೇನು ಗೊತ್ತಾ?
ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ ಮಾರ್ಚ್ 28 ರಿಂದ ಏಪ್ರಿಲ್ 13 ರವರೆಗೆ ಮಧ್ಯಾಹ್ನ 2.30 ರಿಂದ 5.45 ಅವಧಿಯಲ್ಲಿ ವೇಳಾಪಟ್ಟಿಗೆ ಅನುಗುಣವಾಗಿ ನಡೆಸಲಾಗುತ್ತದೆ. ಏಪ್ರಿಲ್ 20ರೊಳಗೆ ಮೌಲ್ಯಮಾಪನ ಪೂರ್ಣಗೊಳಿಸಿ ಏಪ್ರಿಲ್ 30 ರಂದು ಆಯಾ ಕಾಲೇಜುಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ.
ಇನ್ನು ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಗೆ ಶುಲ್ಕ ಪಾವತಿಸಲು ಮೇ. 16 ಕೊನೆಯ ದಿನವಾಗಿದ್ದು, ಮೇ. 25 ರಿಂದ ಜೂನ್ 6 ರವರೆಗೆ ಪೂರಕ ಪರೀಕ್ಷೆ ನಡೆಯಲಿದ್ದು, ಜೂನ್ 15 ರಂದು ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ.
BREAKING NEWS: ಮಹಾಭಾರತದ ಭೀಮ ಪಾತ್ರಧಾರಿ ಪ್ರವೀಣ್ ಕುಮಾರ್ ಸೋಬ್ತಿ ಇನ್ನಿಲ್ಲ | Praveen Kumar Passes away