ಬೆಂಗಳೂರು : ಬೆಂಗಳೂರಿನ ಚಾಮರಾಜನಗರದ ಈದ್ಗಾ ಮೈದಾನ ಕಂದಾಯ ಇಲಾಖೆಗೆ ಸೇರಿದ ಸ್ವತ್ತು ಎಂದು ಘೋಷಣೆ ಮಾಡಿದ ಬೆನ್ನಲ್ಲೇ ಆಗಸ್ಟ್ 15 ರ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಈ ಬಾರಿ ಸ್ವಾತಂತ್ರ್ಯೋತ್ಸವ ಆಚರಿಸುವುದು ಶತಃಸಿದ್ಧ ಎಂದು ಚಾಮರಾಜಪೇಟೆ ನಾಗರಿಕರ ಒಕ್ಕೂಟ ತಿಳಿಸಿದೆ.
ಮೈದಾನವು ವಕ್ಫ್ ಮಂಡಳಿಗೆ ಸೇರಿದ್ದಲ್ಲ, ಅದು ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಗೆ ಸೇರಿದ್ದು ಎಂದು ಬಿಬಿಎಂಪಿ ಘೋಷಿಸಿದ ಹಿನ್ನೆಲೆಯಲ್ಲಿ ಚಾಮರಾಜನಪೇಟೆಯ ಮೈದಾನದಲ್ಲಿ ಸ್ವಾತಂತ್ರ್ಯೋತ್ಸವ ಆಚರಿಸಲು ನಾವು ತೀರ್ಮಾನಿಸಿದ್ದೇವೆ.ಈ ಸಂಬಂಧಿಸಿದ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದೇವೆ ಎಂದು ಹೇಳಿದೆ.
ಮೈದಾನವು ಸಾರ್ವಜನಿಕರ ಆಸ್ತಿ. ಅಲ್ಲಿ ಸ್ವಾತಂತ್ರ್ಯ ದಿನಾಚರಣೆ ನಡೆಸಲು, ತ್ರಿವರ್ಣ ಧ್ವಜ ಹಾರಿಸಲು ಯಾರ ಅನುಮತಿಯೂ ಬೇಕಿಲ್ಲ. ನಮ್ಮ ಜೀವ ಹೋದರೂ ನಾವು ಧ್ವಜಾರೋಹಣ ಮಾಡುತ್ತೇವೆ ಎಂದು ಹೇಳಿದೆ.