ಮೈಸೂರು : ಜೆಡಿಎಸ್ ಅಧಿಕಾರಕ್ಕೆ ಬಂದರೆ ಸ್ತ್ರೀ ಶಕ್ತಿ ಸಂಘಗಳ ಸಾಲ ಮನ್ನಾ ಜೆಡಿಎಸ್ ಅಧಿಕಾರಕ್ಕೆ ಬಂದರೆ ಸ್ತ್ರೀ ಶಕ್ತಿ ಸಂಘಗಳ ಸಾಲ ಮನ್ನಾ ಮಾಡುತ್ತೇವೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.
ಮೈಸೂರು ತಾಲೂಕಿನ ಉತ್ತನಹಳ್ಳಿ ಬಳಿ ಜೆಡಿಎಸ್ ಪಂಚರತ್ನ ಯಾತ್ರೆಯ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಕುಮಾರಸ್ವಾಮಿ ಮಾತನಾಡಿದರು. ಈ ಬಾರಿ ಜೆಡಿಎಸ್ ಅಧಿಕಾರಕ್ಕೆ ಬರಲಿದೆ, ನನ್ನ ರಾಜಕೀಯ ಬೆಳವಣಿಗೆಗೆ ಮಂಡ್ಯ, ಮೈಸೂರು ಜನ ಕಾರಣ. ರೈತರ ಮಕ್ಕಳಿಗೆ ಮದುವೆಯಾಗಲು ಹೆಣ್ಣು ಕೊಡಲು ಮುಂದೆ ಬರುತ್ತಿಲ್ಲ ರೈತರೊಬ್ಬರು ನನಗೆ ಮನವಿ ಸಲ್ಲಿಸಿದ್ದರು. ಮುಂದಿನ ದಿನಗಳಲ್ಲಿ ರೈತರ ಮಕ್ಕಳಿಗೆ ಅನುಕೂಲವಾಗುವಂತಹ ಕಾರ್ಯಕ್ರಮಗಳನ್ನು ಜಾರಿಗೆ ತರುತ್ತೇನೆ ಎಂದು ಹೇಳಿದರು.
ನನ್ನ ಆರೋಗ್ಯ ಲೆಕ್ಕಿಸದೇ ಪಂಚರತ್ನ ಯಾತ್ರೆ ಮಾಡಿದ್ದೇನೆ, 120 ಕ್ಷೇತ್ರದಲ್ಲಿ ಜೆಡಿಎಸ್ ಗೆಲುವು ಸಾಧಿಸಲಿದೆ, ಇದಕ್ಕೆ ನಿಮ್ಮ ಆಶೀರ್ವಾದ ಬೇಕು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದರು.ಪಂಚರತ್ನ ಯಾತ್ರೆ ನಮ್ಮ ಸ್ವಾರ್ಥಕ್ಕಾಗಿ ಮಾಡಿದ್ದಲ್ಲ, ಇದು ನಿಮ್ಮ ಕಾರ್ಯಕ್ರಮ. ಹಗಲು ರಾತ್ರಿ ನಿದ್ದೆ ಇಲ್ಲದೇ ನಾವು 90 ಕ್ಷೇತ್ರದಲ್ಲಿ ಪ್ರವಾಸ ಮಾಡಿದ್ದೇನೆ, ಈ ಕಾರ್ಯಕ್ರಮ ಇಡೀ ರಾಜ್ಯಕ್ಕೆ ತಲುಪಬೇಕು ಎಂದು ಕುಮಾರಸ್ವಾಮಿ ಹೇಳಿದರು.ನನ್ನ ಆರೋಗ್ಯ ಲೆಕ್ಕಿಸದೇ ಪಂಚರತ್ನ ಯಾತ್ರೆ ಮಾಡಿದ್ದೇನೆ, 120 ಕ್ಷೇತ್ರದಲ್ಲಿ ಜೆಡಿಎಸ್ ಗೆಲುವು ಸಾಧಿಸಲಿದೆ, ಇದಕ್ಕೆ ನಿಮ್ಮ ಆಶೀರ್ವಾದ ಬೇಕು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದರು.