ಮೈಸೂರು : ಆಗಸ್ಟ್ 26 ರಂದು ಕಾಂಗ್ರೆಸ್ ಕರೆ ಕೊಟ್ಟಿದ್ದ ಮಡಿಕೇರಿ ಚಲೋ ಕೈಬಿಟ್ಟಿರುವುದಕ್ಕೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದು, ಮಡಿಕೇರಿ ಚಲೋ ಕೈಬಿಟ್ಟ ಕಾಂಗ್ರೆಸ್ ನಾಯಕರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಡಿಕೇರಿ ಚಲೋ ವಿಚಾರದಲ್ಲಿ ಕಾಂಗ್ರೆಸ್ ನಿಲುವನ್ನು ನಾನು ಸ್ವಾಗತಿಸುತ್ತೇನೆ. ಶಾಂತ ವಾತಾವರಣ ಇದ್ದಾಗ ಎಷ್ಟು ಬೇಕಾದ್ರೂ ಜನ ಸೇರಿಸಲಿ, ಆದರೆ ವಾತಾವರಣ ಹದಗೆಟ್ಟಾಗ ಸಮಾವೇಶ ಬೇಡ. ಇಂತಹ ಸಮಯದಲ್ಲಿ ಮಡಿಕೇರಿ ಚಲೋ ಕೈಬಿಟ್ಟ ಕಾಂಗ್ರೆಸ್ ನಾಯಕರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದರು.
BREAKING NEWS : ʻ ಆ. 26ರಂದು ಮಡಿಕೇರಿ ಚಲೋಗೆ ಅವಕಾಶ ಇಲ್ಲ ʼ : ಐಜಿ ಪ್ರವೀಣ್ ಮಧುಕರ್ ಸೂಚನೆ
ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಜಿಲ್ಲಾಧಿಕಾರಿ ಆದೇಶ ಎಂದರೆ ಸರ್ಕಾರದ ಆದೇಶ. ಜವಾಬ್ದಾರಿಯುತ ಪ್ರತಿಪಕ್ಷವಾಗಿ ನಾವು ಸರ್ಕಾರದ ಆದೇಶವನ್ನು ಪರಿಪಾಲಿಸುತ್ತೇವೆ. ಕೊಡಗು ಜಿಲ್ಲೆಯಲ್ಲಿ ನಾನು ನಡೆಸಲು ಉದ್ದೇಶಿಸಿದ್ದ ಪ್ರತಿಭಟನೆಯನ್ನು ಮುಂದೂಡಲು ನಿರ್ಧರಿಸಿದ್ದೇವೆ ಎಂದು ಹೇಳಿದ್ದಾರೆ.