ಶಿವಮೊಗ್ಗ : ಅವಹೇಳನಕಾರಿಯಾಗಿ ಮಾತನಾಡುವ ಮೂಲಕ ಹೆಣ್ಣುಮಕ್ಕಳಿಗೆ ಶಾಸಕ ಪ್ರಿಯಾಂಕ್ ಖರ್ಗೆ ಅವಮಾನ ಮಾಡಿದ್ದಾರೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ.
BIGG NEWS : ಶಿವಮೊಗ್ಗದಲ್ಲಿ ಅಶಾಂತಿ ವಾತಾವರಣ ಸೃಷ್ಟಿಗೆ ಯತ್ನ : ಸಂಸದ ಬಿ.ವೈ. ರಾಘವೇಂದ್ರ
ಶಾಸಕ ಪ್ರಿಯಾಂಕ್ ಖರ್ಗೆ ಲಂಚ-ಮಂಚ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕಿಡಿ ಕಾರಿರುವ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಪ್ರಿಯಾಂಕ್ ಖರ್ಗೆ ಕ್ಷಮೆಯಿಲ್ಲದ ಅಕ್ಷಮ್ಯ ಅಪರಾಧ ಮಾಡಿದ್ದಾರೆ.ಕೂಡಲೇ ಪ್ರಿಯಾಂಕ್ ಖರ್ಗೆ ಅವರನ್ನು ಬಂಧಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ಶಿವಮೊಗ್ಗದಲ್ಲಿ ಸಾವರ್ಕರ್ ಅಪಮಾನ ಮಾಡಿದ್ದು ಅಕ್ಷಮ್ಯ ಅಪರಾಧ ಅಪಮಾನ ಮಾಡಿದವರನ್ನು ಈಗಾಗಲೇ ಬಂಧಿಸಲಾಗಿದೆ. ಈ ರೀತಿ ಹೇಳಿಕೆ ನೀಡುವವರಿಗೆ ಶಿಕ್ಷೆ ಆಗಬೇಕು ಆಗ ಮಾತ್ರ ಇಂತಹ ಘಟನೆಗಳು ಮರುಕಳಿಸೋದಿಲ್ಲ. ಇಡೀ ವಿಶ್ವವೇ ಸಾವರ್ಕರ್ ಅವರನ್ನು ಕೊಂಡಾಡುತ್ತಿದೆ ಎಂದು ಹೇಳಿದ್ದಾರೆ.