ಬೆಂಗಳೂರು : ಅಧಿಕಾರದ ದುರಾಸೆಗೆ ಅನ್ಯಪಕ್ಷಗಳನ್ನು ನಂಬಿಸಿ ಕತ್ತು ಕುಯ್ಯವ ಕಾಂಗ್ರೆಸ್ ಪಕ್ಷ ಎಸಗಿದ ಪಾಪಕ್ಕೆ ಈಗ ಫಲ ಉಣ್ಣುತ್ತಿದೆ. ಚುನಾವಣೆ ಹತ್ತಿರ ಬರುತ್ತಿದ್ದಂತೆ ಸೋಗಲಾಡಿ ಸಿದ್ದರಾಮಾಯಣ ಶುರುವಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಸ್ವಯಂಘೋಷಿತ ಸಂವಿಧಾನ ರಕ್ಷಕ ಸಿದ್ದರಾಮಯ್ಯ ಮತ್ತೆ ಜೆಡಿಎಸ್ ಬಗ್ಗೆ ವಿಷ ಕಾರಿಕೊಂಡಿದ್ದಾರೆ. ಜೆಡಿಎಸ್ ಪಕ್ಷ ಸ್ವಾತಂತ್ರ್ಯ ಹೋರಾಟಕ್ಕೆ ನೀಡಿದ ಕೊಡುಗೆ ಏನು ಎಂದು ಅವರು ಪ್ರಶ್ನಿಸಿದ್ದಾರೆ. ನಮ್ಮ ಪಕ್ಷದ್ದು ಇರಲಿ, ಸ್ವಾತಂತ್ರ್ಯ ಹೋರಾಟಕ್ಕೆ ಈ ಸೋಗಲಾಡಿ ಸಿದ್ದಸೂತ್ರದಾರನ ಕೊಡುಗೆ ಏನು? ಎಂದು ಪ್ರಶ್ನಿಸಿದ್ದಾರೆ.
ಸ್ವಯಂಘೋಷಿತ ಸಂವಿಧಾನ ರಕ್ಷಕ ಸಿದ್ದರಾಮಯ್ಯ ಮತ್ತೆ @JanataDal_S ಬಗ್ಗೆ ವಿಷ ಕಾರಿಕೊಂಡಿದ್ದಾರೆ. ಜೆಡಿಎಸ್ ಪಕ್ಷ ಸ್ವಾತಂತ್ರ್ಯ ಹೋರಾಟಕ್ಕೆ ನೀಡಿದ ಕೊಡುಗೆ ಏನು ಎಂದು ಅವರು ಪ್ರಶ್ನಿಸಿದ್ದಾರೆ.
ನಮ್ಮ ಪಕ್ಷದ್ದು ಇರಲಿ, ಸ್ವಾತಂತ್ರ್ಯ ಹೋರಾಟಕ್ಕೆ ಈ ಸೋಗಲಾಡಿ ಸಿದ್ದಸೂತ್ರದಾರನ ಕೊಡುಗೆ ಏನು? 1/14— H D Kumaraswamy (@hd_kumaraswamy) August 8, 2022
ವಿಕಿಪೀಡಿಯಾ ಪ್ರಕಾರ ನಿಮ್ಮ ಜನ್ಮವರ್ಷ 1947. ಹುಟ್ಟಿದ ಕೂಡಲೇ ಪಂಚೆ ಕಟ್ಟಿ ಸ್ವಾತಂತ್ಯ ಸಂಗ್ರಾಮಕ್ಕೆ ಧುಮುಕಿದರಾ ಮಿಸ್ಟರ್ ಸಿದ್ದರಾಮಯ್ಯ? ಎಂದು ವ್ಯಂಗ್ಯವಾಡಿದ್ದಾರೆ.
ವಿಕಿಪೀಡಿಯಾ ಪ್ರಕಾರ ನಿಮ್ಮ ಜನ್ಮವರ್ಷ 1947. ಹುಟ್ಟಿದ ಕೂಡಲೇ ಪಂಚೆ ಕಟ್ಟಿ ಸ್ವಾತಂತ್ಯ ಸಂಗ್ರಾಮಕ್ಕೆ ಧುಮುಕಿದರಾ ಮಿಸ್ಟರ್ ಸಿದ್ದರಾಮಯ್ಯ? 2/14
— H D Kumaraswamy (@hd_kumaraswamy) August 8, 2022
ಜೆಡಿಎಸ್ ಸ್ಥಾಪನೆ ಆಗಿದ್ದೇ 1999ರಲ್ಲಿ. ಆಗ ನೀವು ಎಲ್ಲಿದ್ದೀರಿ? ನಿಮಗೂ ಕಾಂಗ್ರೆಸ್ ಪಕ್ಷಕ್ಕೂ ಏನು ಸಂಬಂಧ? ನೀವು ಕಾಂಗ್ರೆಸ್ ಸೇರಿದ್ದು 2006ರಲ್ಲಿ. ಹೀಗಾಗಿ ಆ ಪಕ್ಷದ ಪೂರ್ವಾಪರದ ಬಗ್ಗೆ ಮಾತನಾಡಲು ಏನು ನೈತಿಕತೆ ಇದೆ ನಿಮಗೆ?
ಜೆಡಿಎಸ್ ಸ್ಥಾಪನೆ ಆಗಿದ್ದೇ 1999ರಲ್ಲಿ. ಆಗ ನೀವು ಎಲ್ಲಿದ್ದೀರಿ? ನಿಮಗೂ ಕಾಂಗ್ರೆಸ್ ಪಕ್ಷಕ್ಕೂ ಏನು ಸಂಬಂಧ? ನೀವು ಕಾಂಗ್ರೆಸ್ ಸೇರಿದ್ದು 2006ರಲ್ಲಿ. ಹೀಗಾಗಿ ಆ ಪಕ್ಷದ ಪೂರ್ವಾಪರದ ಬಗ್ಗೆ ಮಾತನಾಡಲು ಏನು ನೈತಿಕತೆ ಇದೆ ನಿಮಗೆ? 3/14
— H D Kumaraswamy (@hd_kumaraswamy) August 8, 2022
ಗೆದ್ದಲು ಕಟ್ಟಿಕೊಂಡ ಹುತ್ತಕ್ಕೆ ಹಾವಿನಂತೆ ಸೇರಿಕೊಂಡ ನೀವು, ಸ್ವಾರ್ಥ ಬೀಜಾಸುರನಾಗಿ ಆ ಪಕ್ಷದ ಮೂಲ ನಾಯಕರನ್ನೆಲ್ಲ ನುಂಗುತ್ತಿರುವ ನಿಮ್ಮ ಭಕಾಸುರ ಬಾಯಲ್ಲಿ ಸ್ವಾತಂತ್ರ್ಯ ಹೋರಾಟದ ಪಾರಾಯಣವೇ? ನಿಮಗೆ ಅದು ಬೇರೆ ಕೇಡು ಎಂದು ಕಿಡಿಕಾರಿದ್ದಾರೆ.
ಅಧಿಕಾರಕ್ಕಾಗಿ ದೀನ ದಲಿತರು, ಅಲ್ಪಸಂಖ್ಯಾತರ ಹೆಸರು ಬಳಸಿಕೊಂಡು, ಹಾದಿಬೀದಿಯಲ್ಲಿ ಹೈಡ್ರಾಮಾ ಆಡಿ ಕಾಂಗ್ರೆಸ್ ಪಕ್ಷಕ್ಕೆ ವಕ್ಕರಿಸಿಕೊಂಡ ನಿಮಗೆ, ಸ್ವಾತಂತ್ರ್ಯ ಹೋರಾಟದ ಬಗ್ಗೆ ಮಾತನಾಡುವ ನೈತಿಕ ಹಕ್ಕಿದೆಯಾ? ಖಂಡಿತಾ ಇಲ್ಲ ಎಂದು ಹೇಳಿದ್ದಾರೆ.
ಗೆದ್ದಲು ಕಟ್ಟಿಕೊಂಡ ಹುತ್ತಕ್ಕೆ ಹಾವಿನಂತೆ ಸೇರಿಕೊಂಡ ನೀವು, ಸ್ವಾರ್ಥ ಬೀಜಾಸುರನಾಗಿ ಆ ಪಕ್ಷದ ಮೂಲ ನಾಯಕರನ್ನೆಲ್ಲ ನುಂಗುತ್ತಿರುವ ನಿಮ್ಮ ಭಕಾಸುರ ಬಾಯಲ್ಲಿ ಸ್ವಾತಂತ್ರ್ಯ ಹೋರಾಟದ ಪಾರಾಯಣವೇ? ನಿಮಗೆ ಅದು ಬೇರೆ ಕೇಡು. 4/14
— H D Kumaraswamy (@hd_kumaraswamy) August 8, 2022
ನೀವು ಹೇಳಿದ ಕಾಂಗ್ರೆಸ್ ಈಗೆಲ್ಲಿದೆ? ನೀವು ಕದ್ದಮಾಲು ಹ್ಯೂಬ್ಲೆಟ್ ವಾಚು ಕಟ್ಟಿದಾಗಲೇ 1947ರ ಕಾಂಗ್ರೆಸ್ ಗೆ ಸಮಾಧಿ ಕಟ್ಟಿದಿರಿ. 5 ವರ್ಷಗಳ ನಿಮ್ಮ ಆಡಳಿತದಲ್ಲಿ ಆ ನತದೃಷ್ಟ ಕಾಂಗ್ರೆಸ್ ಪಕ್ಷಕ್ಕೆ ಎಷ್ಟು ಸಾವಿನ ಮೊಳೆ ಹೊಡೆದಿರಿ, ಲೆಕ್ಕ ಹೇಳಬೇಕೆ ಮಿಸ್ಟರ್ ಸಿದ್ದರಾಮಯ್ಯ? ಎಂದು ಪ್ರಶ್ನಿಸಿದ್ದಾರೆ.