ಬೆಳಗಾವಿ : ಮಹಾರಾಷ್ಟ್ರ ಸರ್ಕಾರ ಗಡಿ ವಿಚಾರದಲ್ಲಿ ಪ್ರಚೋದನೆ ನೀಡುತ್ತಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಮಹಾರಾಷ್ಟ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
BIGG NEWS : ತೀರ್ಥಹಳ್ಳಿಗೆ ರೋಹಿತ್ ಚಕ್ರತೀರ್ಥ ಕಾಲಿಡುವುದೇ ಬೇಡ : ವಿವಿಧ ಸಂಘಟನೆಗಳಿಂದ ಎಚ್ಚರಿಕೆ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರ ವಿಧಾನಸಭೆಯಲ್ಲಿ ಗಡಿ ವಿವಾದದ ಬಗ್ಗೆ ಸಿಎಂ ಏಕನಾಥ್ ಶಿಂದೆ ನಿರ್ಣಯ ಮಂಡಿಸಿದ್ದು ಪ್ರಚೋದಿಸಲು. ನಮ್ಮ ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದ್ದು ಬೇರೆ, ಮಹಾರಾಷ್ಟ್ರ ಸರ್ಕಾರ ಮಂಡಿಸಿದ ನಿರ್ಣಯ ಬೇರೆ. ಮಹಾರಾಷ್ಟ್ರ ಸರ್ಕಾರ ಗಡಿ ವಿಚಾರದಲ್ಲಿ ಮೊದಲಿನಿಂದಲೂ ಕ್ಯಾತೆ ತೆಗೆಯುತ್ತಿದೆ ಎಂದು ಕಿಡಿಕಾರಿದ್ದಾರೆ.
ಇಂದು ಮಹಾರಾಷ್ಟ್ರ ವಿಧಾನಸಭೆಯಲ್ಲಿ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಅವರು ಬೆಳಗಾವಿ, ಕಾರವಾರ, ನಿಪ್ಪಾಣಿ ಸೇರಿದಂತೆ 865 ಹಳ್ಳಿಗಳು ಮಹಾರಾಷ್ಟ್ರಕ್ಕೆ ಸೇರಬೇಕು ಎಂಬ ನಿರ್ಣಯವನ್ನು ಮಂಡಿಸಿದ್ದಾರೆ.
BREAKING NEWS: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ:ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದ ಏಕನಾಥ್ ಶಿಂಧೆ