ಮಂಡ್ಯ : ವಿಧಾನಸಭೆ ಚುನಾವಣೆಗೆ ಭರ್ಜರಿ ಸಿದ್ದತೆ ನಡೆಸಿರುವ ಕಾಂಗ್ರೆಸ್ ಪಕ್ಷ ಸದ್ಯ ಭಾರತ್ ಜೋಡೋ ಪಾದಯಾತ್ರೆಯಲ್ಲಿ ತೊಡಗಿದ್ದು, ಭಾರತ್ ಜೋಡೋ ಪಾದಯಾತ್ರೆ ಬಳಿಕ ರಾಜ್ಯಾದ್ಯಂತ ಬಸ್ ಯಾತ್ರೆ ಮಾಡಲು ಮಾಜಿ ಸಿಎಂ ಸಿದ್ದರಾಮಯ್ಯ ಸಿದ್ದತೆ ನಡೆಸಿದ್ದಾರೆ.
‘RuPay ಕ್ರೆಡಿಟ್ ಕಾರ್ಡ್ ಬಳಕೆದಾರ’ರಿಗೆ ಗುಡ್ ನ್ಯೂಸ್: ಯಾವುದೇ ಬಳಕೆ ಶುಲ್ಕವಿಲ್ಲ – NPCI ಸ್ಪಷ್ಟನೆ
ಈ ಕುರಿತು ಮಾಹಿತಿ ನೀಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ರಥಯಾತ್ರೆಯನ್ನು ಈ ಹಿಂದೆ ಅಕ್ಟೋಬರ್ ಅಥವಾ ನವೆಂಬರ್ ಮಾಸಾಂತ್ಯದಲ್ಲಿ ಆರಂಭಿಸಲು ಉದ್ದೇಶಿಸಲಾಗಿತ್ತು. ಆದರೆ, ಕೆಲ ಕಾರಣಗಳಿಂದ ದಿನಾಂಕ ನಿಗದಿಗೊಳಿಸಲು ವಿಳಂಬವಾಗಿದೆ. ಬಸ್ ಯಾತ್ರೆ ಕುರಿತು ಪೂರ್ವಭಾವಿ ಸಭೆ ಈ ತಿಂಗಳು ಕೊನೆಯಲ್ಲಿ ನಡೆಯಲಿದೆ. ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಬಸ್ ಯಾತ್ರೆ ನಡೆಯಲಿದೆ. ಪ್ರತಿ ವಿಧಾನಸಭಾ ಕ್ಷೇತ್ರದ ಶಾಸಕರು ಬಸ್ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಸಂಬಂಧ ವರಿಷ್ಠರನ್ನು ಸದ್ಯದಲ್ಲೇ ಭೇಟಿ ಮಾಡಿ ಅವರ ಒಪ್ಪಿಗೆ ಪಡೆಯಲಾಗುವುದು ಎಂದು ಹೇಳಿದ್ದಾರೆ.
BIGG NEWS: ಸಿಎಂ ಬೊಮ್ಮಾಯಿಗೆ ʼರಾಹುಲ್ ಗಾಂಧಿ ಬರೆದ ಪತ್ರʼದಲ್ಲಿ ಏನಿದೆ ಗೊತ್ತಾ? ಇಲ್ಲಿದೆ ಮಾಹಿತಿ
ದಾವಣಗೆರೆಯಲ್ಲಿ ನಡೆದ ಸಿದ್ದರಾಮೋತ್ಸವ ಯಶಸ್ಸಿನ ಬೆನ್ನಲ್ಲೇ ಸಿದ್ದರಾಮಯ್ಯ ಅವರು ರಥಯಾತ್ರೆಗೆ ಪ್ಲ್ಯಾನ್ ನಡೆಸಿದ್ದಾರೆ. ಇದಕ್ಕಾಗಿ ವಿಶೇಷ ವಾಹನವೂ ತಯಾರಾಗುತ್ತಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ ರಾಜ್ಯದಿಂದ ತೆರಳಿದ ಬಳಿಕ ರಾಜ್ಯಾದ್ಯಂತ ರಥಯಾತ್ರೆ ಆರಂಭಗೊಳ್ಳಲಿದೆ ಮೂಲಗಳು ತಿಳಿಸಿವೆ.