ಬೆಂಗಳೂರು : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರುರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಖಂಡಿಸಿ ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿರುವ ಬಜರಂಗದಳದ ನಾಯಕ ಪ್ರವೀಣ್ ನೆಟ್ಟಾರ್ ಹತ್ಯೆ ಖಂಡನೀಯ. ಪೊಲೀಸರು ತಕ್ಷಣ ಕೊಲೆಗಡುಕರನ್ನು ಬಂಧಿಸಿ ಊಹಾಪೋಹಗಳಿಂದ ಶಾಂತಿ-ಸುವ್ಯವಸ್ಥೆ ಕದಡುವುದನ್ನು ತಪ್ಪಿಸಬೇಕು. ಕೊಲೆಗಡುಕರ ಪಕ್ಷ,ಜಾತಿ,ಧರ್ಮವನ್ನು ಲೆಕ್ಕಿಸದೆ ಪೊಲೀಸರು ಮುಲಾಜಿಲ್ಲದೆ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿರುವ ಬಜರಂಗದಳದ ನಾಯಕ ಪ್ರವೀಣ್ ನೆಟ್ಟಾರ್ ಹತ್ಯೆ ಖಂಡನೀಯ.
ಪೊಲೀಸರು ತಕ್ಷಣ ಕೊಲೆಗಡುಕರನ್ನು ಬಂಧಿಸಿ ಊಹಾಪೋಹಗಳಿಂದ ಶಾಂತಿ-ಸುವ್ಯವಸ್ಥೆ ಕದಡುವುದನ್ನು ತಪ್ಪಿಸಬೇಕು.
ಕೊಲೆಗಡುಕರ ಪಕ್ಷ,ಜಾತಿ,ಧರ್ಮವನ್ನು ಲೆಕ್ಕಿಸದೆ ಪೊಲೀಸರು ಮುಲಾಜಿಲ್ಲದೆ ಕ್ರಮಕೈಗೊಳ್ಳಬೇಕು. pic.twitter.com/fjSda7DbQn
— Siddaramaiah (@siddaramaiah) July 27, 2022
ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಬಜರಂಗದಳದ ಮುಖಂಡ, ಅಕ್ಷಯ ಕೋಳಿ ಅಂಗಡಿ ಮಾಲೀಕ ಪ್ರವೀಣ್ ನೆಟ್ಟಾರು (32) ಎಂಬುವರನ್ನು ಮಂಗಳವಾರ ಹತ್ಯೆ ಮಾಡಲಾಗಿದೆ.