ವಿಜಯಪುರ : ವಿಜಯಪುರದ ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿಗಳಿಗೆ ಮಠದಲ್ಲೇ ಚಿಕಿತ್ಸೆ ಮುಂದುವರೆದಿದ್ದು, ಇಂದು ಬೆಳಗ್ಗೆ ಡಾ. ಮಲ್ಲಣ್ಣ ಮೂಲಿಮನಿ ಹಾಗೂ ಇತರ ವೈದ್ಯರಿಂದ ಬುಲೆಟಿನ್ ಬಿಡುಗಡೆ ಮಾಡಲಿದ್ದಾರೆ.
BIGG NEWS : ಚುನಾವಣೆಗೆ ಬಿಜೆಪಿ ಭರ್ಜರಿ ಸಿದ್ಧತೆ : ಇಂದಿನಿಂದ `ಬೂತ್ ವಿಜಯ’ ಅಭಿಯಾನ
ಸೋಮವಾರ ಬೆಳಗ್ಗೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಲಾಗುತ್ತದೆ ಎನ್ನಲಾಗಿದೆ. ಶ್ರೀಗಳಿಗೆ ಚಿಕಿತ್ಸೆ ನೀಡುತ್ತಿರುವ ಡಾ. ಮಲ್ಲಣ್ಣ ಮೂಲಿಮನಿ ಹಾಗೂ ಇತರ ವೈದ್ಯರಿಂದ ಬುಲೆಟಿನ್ ಬಿಡುಗಡೆ ಮಾಡಲಿದ್ದಾರೆ. ಆಶ್ರಮದ ಮಲ್ಲಿಕಾರ್ಜುನ ಶಿವಯೋಗಿಗಳ ಗದ್ದುಗೆ ಬಳಿ ಸೇರಿದ ಅಪಾರ ಸಂಖ್ಯೆಯ ಭಕ್ತರು ಶ್ರೀಗಳು ಗುಣಮುಖರಾಗಲಿ ಎಂದು ಪ್ರಾರ್ಥನೆ ಸಲ್ಲಿಸಿದ್ದಾರೆ. ಮಠಕ್ಕೆ ಭಕ್ತರ ದಂಡು ಹರಿದು ಬರುತ್ತಿದ್ದು, ಗೇಟ್ ಮುಂಭಾಗದಲ್ಲಿ ಭಾರಿ ಸಂಖ್ಯೆಯ ಭಕ್ತರು ನೆರೆದಿದ್ದಾರೆ. ಶ್ರೀಗಳ ದರ್ಶನಕ್ಕೆ ಅವಕಾಶ ಕಲ್ಪಿಸುವಂತೆ ಭಕ್ತರು ಪಟ್ಟು ಹಿಡಿದಿದ್ದಾರೆ.
ಇನ್ನು ಈಗಾಗಲೇ ಸಿಎಂ ಬೊಮ್ಮಾಯಿ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಶ್ರೀಗಳನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ. ಹೀಗಿರುವಾಗ ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಮಾಜಿ ಸಚಿವ ಎಂಬಿ ಪಾಟೀಲ್ ಕೂಡಾ ಶ್ರೀಗಳನ್ನು ನೋಡಲು ಆಗಮಿಸಲಿದ್ದಾರೆ.