ಬೆಂಗಳೂರು : ಪಿಎಸ್ ಐ ನೇಮಕಾತಿ ಹಗರಣ ಸಂಬಂಧ ಮಾಜಿ ಸಿಎಂ ಸಿದ್ದರಾಮಯ್ಯ ಸ್ಪೋಟಕ ಹೇಳಿಕೆ ನೀಡಿದ್ದು, ಹಗರಣದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಪುತ್ರ ವಿಜಯೇಂದ್ರ ಹಾಗೂ ಸಚಿವ ಅಶ್ವತ್ಥ್ ನಾರಾಯಣ ಭಾಗಿಯಾಗಿದ್ದಾರೆ ಎಂದು ಆರೋಪಿಸಿದ್ದಾರೆ.
ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಪಿಎಸ್ಐ ನೇಮಕಾತಿ ಹಗರಣದಲ್ಲಿ ಸಚಿವರು ಮತ್ತು ಆಡಳಿತ ಪಕ್ಷದ ನಾಯಕರೇ ಭಾಗಿಯಾಗಿರುವುದರಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಗೃಹಸಚಿವ ಆರಗ ಜ್ಞಾನೇಂದ್ರ ಅವರು ರಾಜೀನಾಮೆ ನೀಡಬೇಕು. ಇಡೀ ಹಗರಣದ ಬಗ್ಗೆ ಹೈಕೋರ್ಟ್ ನ್ಯಾಯಮೂರ್ತಿಗಳ ಮೇಲುಸ್ತುವಾರಿಯಲ್ಲಿ ನ್ಯಾಯಾಂಗ ತನಿಖೆ ನಡೆಯಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಪಿಎಸ್ಐ ನೇಮಕಾತಿ ಹಗರಣದಲ್ಲಿ ಸಚಿವರು ಮತ್ತು ಆಡಳಿತ ಪಕ್ಷದ ನಾಯಕರೇ ಭಾಗಿಯಾಗಿರುವುದರಿಂದ ಮುಖ್ಯಮಂತ್ರಿ @BSBommai ಮತ್ತು ಗೃಹಸಚಿವ ಆರಗ ಜ್ಞಾನೇಂದ್ರ ಅವರು ರಾಜೀನಾಮೆ ನೀಡಬೇಕು. ಇಡೀ ಹಗರಣದ ಬಗ್ಗೆ ಹೈಕೋರ್ಟ್ ನ್ಯಾಯಮೂರ್ತಿಗಳ ಮೇಲುಸ್ತುವಾರಿಯಲ್ಲಿ ನ್ಯಾಯಾಂಗ ತನಿಖೆ ನಡೆಯಬೇಕು. 1/12#PSIScam pic.twitter.com/Cj1z24Kv5T
— Siddaramaiah (@siddaramaiah) July 5, 2022
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮಗ ವಿಜಯೇಂದ್ರ ಹಾಗೂ ಸಚಿವ ಅಶ್ವತ್ಥ್ ನಾರಾಯಣ ಅವರು ಈ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪಗಳು ಕೇಳಿಬಂದಿದೆ. ಅಶ್ವಥ್ ನಾರಾಯಣ್ ಸಂಬಂಧಿಕರು ಮಾರ್ಕ್ಸ್ ತಿದ್ದಿ ಆಯ್ಕೆಯಾಗಿದ್ದಾರೆ ಎನ್ನಲಾಗುತ್ತಿದೆ. ಹೀಗಿದ್ದಾಗ ಸಿಐಡಿ ತನಿಖೆಯಿಂದ ಯಾವ ನ್ಯಾಯ ಸಿಗಲು ಸಾಧ್ಯ?
ಮಾಜಿ ಮುಖ್ಯಮಂತ್ರಿ @BSYBJP ಅವರ ಮಗ ವಿಜಯೇಂದ್ರ ಹಾಗೂ ಸಚಿವ @drashwathcn ಅವರು ಈ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪಗಳು ಕೇಳಿಬಂದಿದೆ. ಅಶ್ವಥ್ ನಾರಾಯಣ್ ಸಂಬಂಧಿಕರು ಮಾರ್ಕ್ಸ್ ತಿದ್ದಿ ಆಯ್ಕೆಯಾಗಿದ್ದಾರೆ ಎನ್ನಲಾಗುತ್ತಿದೆ. ಹೀಗಿದ್ದಾಗ ಸಿಐಡಿ ತನಿಖೆಯಿಂದ ಯಾವ ನ್ಯಾಯ ಸಿಗಲು ಸಾಧ್ಯ? 2/12#PSIScam
— Siddaramaiah (@siddaramaiah) July 5, 2022
ಪಿಎಸ್ಐ ನೇಮಕಾತಿ ಉಸ್ತುವಾರಿ ವಹಿಸಿರುವ ಎಡಿಜಿಪಿ ಅಮೃತ್ ಪಾಲ್ ಅವರನ್ನೇ ಈಗ ಬಂಧಿಸಲಾಗಿದೆ. ಈ ಹಗರಣವನ್ನು ವಿಧಾನಸಭೆಯಲ್ಲಿ ಪ್ರಸ್ತಾಪ ಮಾಡಿದಾಗ ಯಾವ ಭ್ರಷ್ಟಾಚಾರವೂ ನಡೆದಿಲ್ಲ ಎಂದು ವಾದಿಸಿದ್ದ ಸಿಎಂ ಬೊಮ್ಮಾಯಿ ಹಾಗೂ ಗೃಹಸಚಿವರು ಈಗೇನು ಹೇಳುತ್ತಾರೆ?
ಆರಗ ಜ್ಞಾನೇಂದ್ರ ಅವರು ತಮ್ಮ ಮಾತು ಮತ್ತು ನಡವಳಿಕೆಗಳಿಂದ ತಾವೊಬ್ಬ ಬೇಜವಾಬ್ದಾರಿ ಸಚಿವ ಎಂದು ಸಾಬೀತು ಪಡಿಸಿದ್ದಾರೆ. ಶಿವಮೊಗ್ಗದಲ್ಲಿ ನಡೆದಿದ್ದ ಕೋಮುಘರ್ಷಣೆ, ಮೈಸೂರಿನಲ್ಲಿ ನಡೆದ ಅತ್ಯಾಚಾರದ ಪ್ರಕರಣಗಳಲ್ಲಿ ಗೃಹಸಚಿವರ ಸುಳ್ಳು ಹೇಳಿಕೆಗಳೇ ಇದಕ್ಕೆ ಸಾಕ್ಷಿ. ಇಂಥವರು ಗೃಹ ಸಚಿವರಾಗಲು ಲಾಯಕಿಲ್ಲ ಎಂದು ಜನರೇ ಆಡಿಕೊಳ್ಳುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.