ಬೆಂಗಳೂರು : ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದು, ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
BIGG NEWS : ಶಿವಮೊಗ್ಗದ ಶಂಕಿತ ಉಗ್ರರ ಜೊತೆ ಸಂಪರ್ಕ : ಗಂಗಾವತಿಯಲ್ಲಿ ಓರ್ವನ ಬಂಧನ
ಸಿಎಂ ಬಸವರಾಜ ಬೊಮ್ಮಾಯಿ ಅವರು ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿ, ಹಿರಿಯ ನಾಯಕ ಎಸ್.ಎಂ ಕೃಷ್ಣ ಅವರ ಆರೋಗ್ಯ ವಿಚಾರಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ, ರಾಜ್ಯದ ಹಿರಿಯ ನಾಯಕ ಎಸ್ ಎಂ ಕೃಷ್ಣ ಜ್ವರದಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು ವೈದೇಹಿ ಆಸ್ಪತ್ರೆಗೆ ದಾಖಲಿಸಿದ್ದರು. ನಂತರ ಉಸಿರಾಟದ ತೊಂದರೆ ಕಾಣಿಸಿಕೊಂಡಿದ್ದರಿಂದ ಮಣಿಪಾಲ್ ಆಸ್ಪತ್ರೆಗೆ ಸೇರಿಸಲಾಗಿದೆ ಅವರ ಆರೋಗ್ಯ ಚೇತರಿಕೆಯಾಗಿದೆ. ಎರಡು, ಮೂರು ದಿನಗಳಲ್ಲಿ ಆಸ್ಪತ್ರೆಯಿಂದ ಅವರು ಮನೆಗೆ ತೆರಳಲಿದ್ದಾರೆ ಎಂದು ತಿಳಿಸಿದರು.
ನಿರಂತರ ಚಿಕಿತ್ಸೆಯಿಂದ ಈಗ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಎರಡು ಮೂರು ದಿನಗಳಲ್ಲಿ ಅವರು ಡಿಸ್ಚಾರ್ಜ್ ಆಗುತ್ತಾರೆ. ರಾಜ್ಯದ ಜನರು ಯಾವುದೇ ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ ಎಂದು ಸಿಎಂ ಬೊಮ್ಮಾಯಿ ಹೇಳಿದರು.