ಕೊಪ್ಪಳ : ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಹುಲಿಹೈದರ ಗ್ರಾಮದಲ್ಲಿ ನಡೆದ ಗುಂಪು ಗರ್ಷಣೆ ಪ್ರಕರಣ ಸಂಬಂಧ ಪೊಲೀಸರು ಇದೀಗ ಕೆಡಿಪಿ ಮಾಜಿ ಸದಸ್ಯನನ್ನು ಬಂಧಿಸಿದ್ದಾರೆ.
ಕೆಡಿಪಿ ಮಾಜಿ ಸದಸ್ಯ ಗುರನಗೌಡ ಆರೋಪಿಗಳು ಪರಾರಿಯಾಗಲು ಸಹಾಯ ಮಾಡಿದ್ದ ಎನ್ನುವ ಆರೋಪದಲ್ಲಿ ಪೊಲೀಸರು ಬಂಧಿಸಿದ್ದಾರೆ. ಹುಲಿಹೈದರ್ ಗ್ರಾಮದ ನಿವಾಸಿಯಾಗಿರುವ ಗುರನಗೌಡ, ದೂರಿನಲ್ಲಿ ಹೆಸರು ಇಲ್ಲದಿದ್ದರೂ ಪೊಲೀಸರು ಬಂಧಿಸಿದ್ದಾರೆ.
ಕನಕಗಿರಿ ತಾಲ್ಲೂಕಿನ ಹುಲಿಹೈದರ್ ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿತ್ತು. ಈ ಘಟನೆಯಲ್ಲಿ ಯಂಕಪ್ಪ ತಳವಾರ (60), ಭಾಷಾಸಾಬ್ (22) ಎಂಬವರು ಸಾವನ್ನಪ್ಪಿದ್ದರು. ಘರ್ಷಣೆಯಲ್ಲಿ ಇಬ್ಬರ ಸಾವು ಪ್ರಕರಣ ಸಂಬಂಧ 58 ಜನರ ವಿರುದ್ಧ ಪ್ರಕರಣ ದಾಖಲಾಗಿತ್ತು. ಇದೀಗ 15 ಕ್ಕೂ ಹೆಚ್ಚು ಆರೋಪಿಗಳನ್ನು ಕನಕಗಿರಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಸದ್ಯ ಸಿಸಿಕ್ಯಾಮರಾ ದೃಶ್ಯಗಳನ್ನಾಧರಿಸಿ 15ಕ್ಕೂ ಹೆಚ್ಚು ಜನರು ವಶಕ್ಕೆ ಪಡೆಯಲಾಗಿದೆ.
BIGG NEWS : ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೂ ಅವಕಾಶ ಕೊಡಿ : ಪ್ರಮೋದ್ ಮುತಾಲಿಕ್