ಹಾಸನ : ಮಾಜಿ ಸಚಿವ ಎ.ಮಂಜು ಜೆಡಿಎಸ್ ಸೇರ್ಪಡೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಫೆಬ್ರವರಿ 10ರಂದು ಅರಕಲಗೂಡಿನಲ್ಲಿ ಆಯೋಜಿಸಿರುವ ಜೆಡಿಎಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾಜಿ ಸಚಿವ ಎ ಮಂಜು ಅಧಿಕೃತವಾಗಿ ಜೆಡಿಎಸ್ ಸೇರಲಿದ್ದಾರೆ.
ಅರಕಲಗೂಡು ಜೆಡಿಎಸ್ ಟಿಕೆಟ್ ಅನ್ನು ಎ ಮಂಜುಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಘೋಷಣೆ ಮಾಡಿದ ಬೆನ್ನಲ್ಲೇ ಜೆಡಿಎಸ್ ಸಮಾವೇಶ ನಡೆಸಲು ಮಂಜು ನಿರ್ಧರಿಸಿದ್ದಾರೆ. ಫೆಬ್ರವರಿ 10ರಂದು ಅರಕಲಗೂಡಿನಲ್ಲಿ ಆಯೋಜಿಸಿರುವ ಜೆಡಿಎಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾಜಿ ಸಚಿವ ಎ ಮಂಜು ಅಧಿಕೃತವಾಗಿ ಜೆಡಿಎಸ್ ಸೇರಲಿದ್ದಾರೆ.
ಎ. ಮಂಜು ಅವರು 2008ರಲ್ಲಿ ಕಾಂಗ್ರೆಸ್ ಸೇರಿ ಅರಕಲಗೂಡು ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಿಂದ ಗೆದ್ದು ಮೀನುಗಾರಿಕೆ ಮತ್ತು ಪಶುಸಂಗೋಪನೆ ಸಚಿವರಾಗಿದ್ದರು. ನಂತರ ಬಿಜೆಪಿ ಸೇರಿ 2019ರ ಸಂಸತ್ ಚುನಾವಣೆಯಲ್ಲಿ ಸ್ಪರ್ಧಿಸಿ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ವಿರುದ್ಧ ಸೋತಿದ್ದರು.
BIGG NEWS : ಮೇಲ್ವರ್ಗಕ್ಕೆ ಶೇ. 10 ಮೀಸಲು ಕೊಡಬೇಕೆಂಬ ನಿಯಮವಿದ್ದರೆ ರಾಜೀನಾಮೆ : ಮಾಜಿ ಸಿಎಂ ಸಿದ್ದರಾಮಯ್ಯ