ಬೆಂಗಳೂರು : ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ಕರ್ನಾಟಕ ರಾಜ್ಯ ಪ್ರಗತಿ ಪಕ್ಷ ಸ್ಥಾಪನೆ ಮಾಡುವುದಾಗಿ ಘೋಷಣೆ ಮಾಡಿದ್ದು, ಈ ಬಗ್ಗೆ ಬಿಜೆಪಿ ಶಾಸಕ ಸಿ.ಟಿ. ರವಿ ಪ್ರತಿಕ್ರಿಯೆ ನೀಡಿದ್ದಾರೆ.
BIGG NEWS : ಯುವಕರೊಂದಿಗೆ ಪಂಚೆಯಲ್ಲೆ ʼಕಬ್ಬಡಿ ಆಡಿದ ಶಾಸಕ ಶಿವಲಿಂಗೇಗೌಡʼ | KM Shivalinge Gowda
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜಾಪ್ರಭುತ್ವದಲ್ಲಿ ಪಕ್ಷ ಕಟ್ಟಲು, ಸ್ಪರ್ಧಿಸಲು ಅವಕಾಶ ಇದೆ. ನೋಡೋಣ ಮತದಾರ ಪ್ರಭುಗಳು ಏನು ಮಾಡ್ತಾರೆ ಅಂದು. ಜನರು ಯಾರಿಗೆ ಆಶೀರ್ವದಿಸುತ್ತಾರೆ ಅನ್ನೋದರ ಮೇಲೆ ನಿಂತಿದೆ ಎಂದರು.
ಬೆಂಗಳೂರಿನ ತಮ್ಮ ಪಾರಿಜಾತ ನಿವಾಸದಲ್ಲಿ ಮಹತ್ವದ ಸುದ್ದಿಗೋಷ್ಠಿ ನಡೆಸಿದ ಜನಾರ್ದನ ರೆಡ್ಡಿ ಅವರು ಕರ್ನಾಟಕ ರಾಜ್ಯ ಪ್ರಗತಿ ಪಕ್ಷ ವನ್ನು ಸ್ಥಾಪನೆ ಮಾಡುವುದಾಗಿ ಘೋಷಿಸಿದ್ದಾರೆ. ಬಿಜೆಪಿಗೆ ಯಾವುದೇ ಕಾರಣಕ್ಕೂ ಹೋಗುವುದಿಲ್ಲ. ಮುಂದಿನ ದಿನಗಳಲ್ಲಿ ಯಾವ ಯಾವ ಕ್ಷೇತ್ರಗಳಿಂದ ಸ್ಪರ್ಧೆ ಮಾಡುತ್ತೇವೆ ಎಂದು ತಿಳಿಸುತ್ತೇನೆ ಎಂದರು.
BIGG NEWS : ಶೀಘ್ರವೇ `ಕರ್ನಾಟಕ ರಾಜ್ಯ ಪ್ರಗತಿ’ ಪಕ್ಷದಿಂದ ಅಭ್ಯರ್ಥಿಗಳ ಘೋಷಣೆ : ಮಾಜಿ ಜನಾರ್ದನ ರೆಡ್ಡಿ