ಮೈಸೂರು : ರಾಜ್ಯ ವಿಧಾನಸಭೆ ಚುಣಾವಣೆ ಹೊತ್ತಲ್ಲೇ ಬಿಜೆಪಿ ಶಾಕ್ ಎದುರಾಗಿದ್ದು, ಮಾಜಿ ಎಂಎಲ್ ಸಿ ಸಂದೇಶ್ ನಾಗರಾಜ್ ಅವರು ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ.
BIGG NEWS: ಬೆಳ್ತಂಗಡಿಯಲ್ಲಿ ನದಿಯ ಸೇತುವೆ ಬಳಿ ಒಂಟಿ ಸಲಗ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ
ಸುದ್ದಿಗಾರರೊಂದಿಗೆ ಮಾತನಾಡಿದ ಸಂದೇಶ್ ನಾಗರಾಜ್ ಅವರು, ಜನವರಿಯಲ್ಲಿ ಬಿಜೆಪಿಗೆ ರಾಜೀನಾಮೆ ಕೊಟ್ಟು, ಕಾಂಗ್ರೆಸ್ ಗೆ ಸೇರ್ಪಡೆಯಾಗುತ್ತೇನೆ. ಬಿಜೆಪಿಯಂತ ಮೋಸಗಾರರು ಯಾರೂ ಇಲ್ಲ. ಕಾಂಗ್ರೆಸ್ ಸೇರ್ಪಡೆ ಬಗ್ಗೆ ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಜೊತೆಗೆ ಮಾತನಾಡಿದ್ದೇನೆ ಎಂದು ಹೇಳಿದ್ದಾರೆ.
ಹೆಚ್. ವಿಶ್ವನಾಥ್, ಯಡಿಯೂರಪ್ಪ ಇಬ್ಬರೂ ನನ್ನನ್ನು ರಾಜಕೀಯ ಬಲಿ ಕೊಟ್ಟಿದ್ದಾರೆ. ವರುಣಾ ಕ್ಷೇತ್ರದಲ್ಲಿ ರಾಜಕೀಯವಾಗಿ ವಿಜಯೇಂದ್ರ ಬಲಿ ಕೊಡಲು ಪ್ಲ್ಯಾನ್ ಮಾಡಿದ್ದಾರೆ.ಸಿದ್ದರಾಮಯ್ಯ ವಿರುದ್ಧ ಕಣಕ್ಕಿಳಿಸಿ ವಿಜಯೇಂದ್ರ ಅವರನ್ನು ಸೋಲಿಸಲು ತಂತ್ರ ರೂಪಿಸಲಾಗಿದೆ.ವಿಜಯೇಂದ್ರ ಅವರು ವರುಣಾ ಬದಲು ಶಿಕಾರಿಪುರ ಕ್ಷೇತ್ರದಿಂದಲೇ ಸ್ಪರ್ಧೆ ಮಾಡಬಹುದು ಎಂದರು.
ಈ ಬಾರಿ ರಾಜ್ಯದಲ್ಲಿ ಬಿಜೆಪಿ ಗೆಲ್ಲುವುದಿಲ್ಲ. ಕಾಂಗ್ರೆಸ್ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರಲಿದೆ.ಪರಿಷತ್ ಸ್ಥಾನ ಕೊಡುತ್ತೇನೆ ಎಂದು ನನ್ನನ್ನು ಬಿಜೆಪಿಗೆ ಕರೆದುಕೊಂಡು ಬಂದರು.ನನ್ನನ್ನು ಬಳಸಿಕೊಡು ಬಿಜೆಪಿಯವರು ಮೋಸ ಮಾಡಿದರು ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.