ಬೆಂಗಳೂರು : ರಾಜ್ಯಾದ್ಯಂತ ಮಹಾಮಳೆ ಅಬ್ಬರ ಮುಂದುವರೆದಿದ್ದು, ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಅವಾಂತರ ಸೃಷ್ಟಿಯಾಗಿದೆ.
ಭಕ್ತಾದಿಗಳೇ ಎಚ್ಚರ..! ಕೊಪ್ಪಳದ ʼಅಂಜನಾದ್ರಿ ಬೆಟ್ಟದಲ್ಲಿ ಚಿರತೆ ಪ್ರತ್ಯಕ್ಷ ʼ : ಭಕ್ತರ ಆಗಮನಕ್ಕೆ ನಿರ್ಬಂಧ
ರಾಜ್ಯದಲ್ಲಿ ಮಳೆಯ ಆರ್ಭಟಕ್ಕೆ ಇಂದು ಒಟ್ಟು ನಾಲ್ವರು ಮೃತಪಟ್ಟಿದ್ದಾರೆ. ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಗುಡುದೂರು ಬಳಿ ತುಂಗಾಭದ್ರ ಎಡದಂತೆ ಕಾಲುವೆಗೆ ಚಾಲಕನ ನಿಯಂತ್ರಣ ತಪ್ಪಿ ಕಾರು ಕಾಲುವೆಗೆ ಉರುಳಿ ಬಿದ್ದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ಓರ್ವ ನಾಪತ್ತೆಯಾಗಿದ್ದಾರೆ.
ಹಾವೇರಿ ಜಿಲ್ಲೆಯಲ್ಲೂ ಮಳೆಯ ಅಬ್ಬರ ಮುಂದುವರೆದಿದ್ದು, ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ತುಮರಿಕೊಪ್ಪ ಗ್ರಾಮದಲ್ಲಿ ಮಳೆಗೆ ಮನೆಗೋಡೆ ಕುಸಿದು ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮಳೆಯ ಅಬ್ಬರಕ್ಕೆ ಓರ್ವ ಬಲಿಯಾಗಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಸೊಣ್ಣಹಳ್ಳಪುರದಲ್ಲಿ ಮಳೆಯಿಂದಾಗಿ ಮನೆ ಗೋಡೆ ಕುಸಿದು ಗ್ರಾಮದ ನಿವಾಸಿ ಬಸವರಾಜ (65) ಸಾವನ್ನಪ್ಪಿದ್ದಾರೆ.
ಭಾರೀ ಮಳೆಯಿಂದಾಗಿ ಬೆಂಗಳೂರು-ಮೈಸೂರು ಹೆದ್ದಾರಿಯೂ ಸೇರಿದಂತೆ ಹಲವು ಪ್ರಮುಖ ರಸ್ತೆಗಳಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿದೆ. ಕೊಪ್ಪಳ, ಗದಗ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಮಳೆ ಬಿಡುವು ಕೊಡದ ಹಿನ್ನೆಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಜಿಲ್ಲಾ ಶಿಕ್ಷಣಾಧಿಕಾರಿಗಳು ರಜೆ ಘೋಷಿಸಿದ್ದಾರೆ.