ಬೆಂಗಳೂರು : ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಗಣೇಶ ಉತ್ಸವ ನಡೆಸಲು ಅವಕಾಶ ನೀಡುವ ಬಗ್ಗೆ ಇಂದು ಸಿಎಂ ಬಸವರಾಜ ಬೊಮ್ಮಾಯಿ ಮಹತ್ವದ ಸಭೆ ನಡೆಸಲಿದ್ದಾರೆ.
Big news: ಕರ್ನಾಟಕದ ಈ ಮೂರು ಜಿಲ್ಲೆಗಳಲ್ಲಿ ಕಬ್ಬಿಣ ಗಣಿಗಾರಿಕೆ ಮಿತಿ ಹೆಚ್ಚಿಸಿದ ಸುಪ್ರೀಂ ಕೋರ್ಟ್
ಚಾಮರಾಜಪೇಟೆಯ ಈದ್ಗಾ ಮೈದಾನವನ್ನು ಧಾರ್ಮಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಿಗೆ ಬಳಸಲು ಅನುಮತಿ ನೀಡುವ ಹೈಕೋರ್ಟ್ ನಿರ್ಧಾರವನ್ನು ಮುಂದುವರಿಸಲು ಕಂದಾಯ ಸಚಿವ ಆರ್.ಅಶೋಕ್ ಮತ್ತು ಅಡ್ವೊಕೇಟ್ ಜನರಲ್ ಅವರೊಂದಿಗೆ ಶನಿವಾರ ಸಭೆ ಕರೆಯುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಚಾಮರಾಜಪೇಟೆಯ ಸರ್ವೇ ನಂಬರ್ 40 ರಲ್ಲಿ ಗಣೇಶ ಉತ್ಸವ ನಡೆಸಲು ಅವಕಾಶ ನೀಡುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು. ಅಲ್ಲಿ ಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲು ನಾವು ಅವಕಾಶ ನೀಡುತ್ತೇವೆ ಎಂದು ಕಂದಾಯ ಸಚಿವ ಆರ್. ಅಶೋಕ ಹೇಳಿದ್ದಾರೆ.