ಬೆಂಗಳೂರು : ರಾಜ್ಯ ಸರ್ಕಾರವು ನೇಕಾರರ ಮಕ್ಕಳಿಗೆ ಸಿಹಿಸುದ್ದಿ ನೀಡಿದ್ದು, 2022-23 ನೇ ಸಾಲಿನ ಆರ್ಥಿಕ ವರ್ಷದಿಂದ ಜಾರಿಗೆ ಬರುವಂತೆ ವಿದ್ಯಾರ್ಥಿ ವೇತನವನ್ನು ಅನುಷ್ಠಾನಗೊಳಿಸಲಾಗಿದೆ.
BIGG NEWS : ವಿಧಾನ ಪರಿಷತ್ ಸಭಾಪತಿ ಚುನಾವಣೆ : ಇಂದು ಬಸವರಾಜ ಹೊರಟ್ಟಿ ನಾಮಪತ್ರ ಸಲ್ಲಿಕೆ
ನೇಕಾರರ ಮಕ್ಕಳಿಗೆ ಹೆಚ್ಚಿನ ಹಾಗೂ ಶಿಕ್ಷಣ ಪ್ರೋತ್ಸಾಹಿಸಲು ವಿದ್ಯಾರ್ಥಿ ವೇತನ ಯೋಜನೆಯನ್ನು ಜಾರಿಗೊಳಿಸಲಾಗಿದ್ದು, ರಾಜ್ಯದ ನೇಕಾರರ ಎಲ್ಲ ಮಕ್ಕಳ ಬ್ಯಾಂಕ್ ಗಳ ಖಾತೆಗೆ ನೇರ ನಗದು ವರ್ಗಾವನೆ ಪದ್ಧತಿಯ ಮೂಲಕ 2022-23 ನೇ ಸಾಲಿನ ಆರ್ಥಿಕ ವರ್ಷದಿಂದ ಜಾರಿಗೆ ಬರುವಂತೆ ವಿದ್ಯಾರ್ಥಿ ವೇತನ ನೀಡಲಾಗುತ್ತದೆ.
ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ?
ಹಂತ-1
ಇಲಾಖೆಯಲ್ಲಿ ಈಗಾಗಲೇ ನೇಕಾರ ಸಮ್ಮಾನ್ ಯೋಜನೆಯಡಿ ನೊಂದಾಯಿಸಲಾಗಿರುವ ಕೈಮಗ್ಗ ನೇಕಾರರು ಹಾಗೂ ಚಾಲ್ತಿಯಲ್ಲಿರುವ ವಿದ್ಯುತ್ ಮಗ್ಗ ಹಾಗೂ ಮಗ್ಗ ಪೂರ್ವ ಚಟುವಟಿಕೆಗಳ ಸಮೀಕ್ಷೆಯಲ್ಲಿ ಗುರುತಿಸಿರುವ ನೇಕಾರರ ಮಾಹಿತಿಯನ್ವಯ ನೇಕಾರರ ಮಕ್ಕಳನ್ನು ಗುರುತಿಸಲಾಗುವುದು.
ಹಂತ-2
ಆದುದರಿಂದ ರಾಜ್ಯದ ನೊಂದಾಯಿತ ನೇಕಾರರು ಅವರ ಮಕ್ಕಳನ್ನು ಗುರುತಿಸುವ ಸಲುವಾಗಿ ಆನ್ ಲೈನ್ ಮೂಲಕ “ಸೇವಾ ಸಿಂಧು” ತಂತ್ರಾಂಶದ ಕರ್ನಾಟಕ ಒನ್ ಮತ್ತು ಗ್ರಾಮ ಒನ್ ರಲ್ಲಿ ಮಾತ್ರ ಈ ಸೇವೆ ಲಭ್ಯವಿರುತ್ತದೆ. ಅದರಂತೆ ನಿಗದಿತ ಶುಲ್ಕವನ್ನು ಪಾವತಿಸಿ ಅರ್ಜಿಯನ್ನು ಸಲ್ಲಿಸುವುದು.
ಹಂತ-3
ತದ ನಂತರ ವಿದ್ಯಾರ್ಥಿ ವೇತನಕ್ಕಾಗಿ ನೇಕಾರರ ಮಕ್ಕಳು ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶ (SSP) ದಲ್ಲಿ ಆನ್ ಲೈನ್ ಮೂಲಕ ಪ್ರತ್ಯೇಕವಾಗಿ ಅರ್ಜಿಯನ್ನು ಸಲ್ಲಿಸುವುದು,
ಹಂತ-4
ಸೇವಾ ಸಿಂಧು ಹಾಗೂ (SSP) ಪೋರ್ಟಲ್ನ ಮಾಹಿತಿ ಹೊಂದಾಣಿಕೆಯಾದ ನಂತರ ಸದರಿಯೋಜನೆಯ ಮಾರ್ಗಸೂಚಿಯನ್ವಯ Post Metric ಹಾಗೂ ಉನ್ನತ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳ ಆಧಾರ್ ಜೋಡಣೆಯಾಗಿರುವ ಬ್ಯಾಂಕ್ ಖಾತೆಗಳಿಗೆ ನೇರ ನಗದು ವರ್ಗಾವಣೆ (ಡಿ.ಬಿ.ಟಿ) ಪದ್ಧತಿಯ ಮೂಲಕ ವಿದ್ಯಾರ್ಥಿವೇತನದ ಮೊತ್ತವನ್ನು ಪಾವತಿಸಲಾಗುವುದು,
ಆದ್ದರಿಂದ, ಸದರಿ ಯೋಜನೆಯನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಜಿಲ್ಲೆಯ ಎಲ್ಲಾ ನೇಕಾರರಲ್ಲಿ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬಹುದಾದ ವಿಳಾಸ ಉಪ ನಿರ್ದೇಶಕರ ಕಛೇರಿ, ಗಾರ್ಮೆಂಟ್ಸ್ ತರಬೇತಿ ಕೇಂದ್ರದ ಕಟ್ಟಡ, ಕೆಐಎಡಿಬಿ ಅಪೇರಲ್ ಪಾರ್ಕ್, ದೊಡ್ಡಬಳ್ಳಾಪುರ-561203