ಬೆಂಗಳೂರು: ರಾಜ್ಯ ಸರ್ಕಾರದಿಂದ ಮಧ್ಯಾಹ್ನದ ಬಿಸಿಯೂಟ ಯೋಜನೆಯಡಿ ಕೆಲಸ ನಿರ್ವಹಿಸುತ್ತಿರುವಂತ ಅಡುಗೆ ಸಿಬ್ಬಂದಿಗಳಿಗೆ 14 ಹೆಚ್ಚುವರಿ ಶಾಲಾ ದಿನಗಳಲ್ಲಿ ಕರ್ತವ್ಯ ನಿರ್ವಹಿಸಿದಂತ ಗೌರವ ಸಂಭಾವನೆಯನ್ನು ಬಿಡುಗಡೆ ಮಾಡಿ ಆದೇಶಿಸಿದೆ.
BIG NEWS : ʻದಾನದ ಉದ್ದೇಶ ಧರ್ಮ ಪರಿವರ್ತನೆಯಾಗಬಾರದುʼ: ಸುಪ್ರೀಂ ಕೋರ್ಟ್
ಈ ಸಂಬಂಧ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಗಳನ್ನು ಹೊರಡಿಸಿದ್ದಾರೆ. 2022-23ನೇ ಸಾಲಿನ ಶೈಕ್ಷಣಿಕ ವರ್ಷದ ಮೇ-2022ರ ತಿಂಗಳಿನಲ್ಲಿ ಪ್ರಧಾನ ಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್ ಯೋಜನೆಯ ಮಧ್ಯಾಹ್ನದ ಉಪಹಾರ ಯೋಜನೆಯ ಅಡಿಯಲ್ಲಿ 14 ಹೆಚ್ಚುವರಿ ಶಾಲಾ ದಿನಗಳಲ್ಲಿ ಕರ್ತವ್ಯ ನಿರ್ವಹಿಸಿರುವ ಅಡುಗೆ ಸಿಬ್ಬಂದಿಗಳಿಗೆ ಗೌರವ ಸಂಭಾವನೆಯನ್ನು ಪಾವತಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರ.
ಇನ್ನೂ ಅಡುಗೆ ಸಿಬ್ಬಂದಿಗಳಿಗೆ 14 ಹೆಚ್ಚುವರಿ ಶಾಲಾ ದಿನಗಳಲ್ಲಿ ಕರ್ತವ್ಯ ನಿರ್ವಹಿಸಿದ್ದಕ್ಕೆ ರೂ.1946.01 ಲಕ್ಷ ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ಈ ಬಿಡುಗಡೆ ಮಾಡಿರುವಂತ ಅನುದಾನದ ವೆಚ್ಚ ಭರಿಸಲು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು, ಜಿಲ್ಲಾ ಪಂಚಾಯ್ತಿ ಸಿಇಓಗಳಿಗೆ ಮತ್ತು ಮುಖ್ಯ ಲೆಕ್ಕಾಧಿಕಾರಿಗಳಿಗೆ ಅನುಮತಿ ನೀಡಲಾಗಿದೆ ಎಂದಿದ್ದಾರೆ.