ಬೆಂಗಳೂರು : ಅತಿವೃಷ್ಟಿಯಿಂದ ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ಈ ಬಾರಿ ಶೀಘ್ರ ಪರಿಹಾರ ನೀಡಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.
Big news: ತ್ರಿಪುರಾ ಸಿಎಂ ʻಮಾಣಿಕ್ ಸಹಾʼಗೆ ಕೊರೊನಾ ಪಾಸಿಟಿವ್ | COVID positive for Tripura CM Manik Saha
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಭಾರೀ ಮಳೆಯಿಂದಾಗಿ ಅತಿವೃಷ್ಟಿಯಾಗಿದ್ದು, ರೈತರು ಬೆಳೆ ನಷ್ಟ ಅನುಭವಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮಳೆ ಸಂಪೂರ್ಣವಾಗಿ ನಿಂತ ಬಳಿಕ ಸಮೀಕ್ಷೆ ಪೂರ್ಣಗೊಳಿಸಿ ಕೇಂದ್ರಕ್ಕೆವರದಿ ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ.
ಅತಿವೃಷ್ಟಿಯಿಂದ ಬೆಳೆ ನಷ್ಟ ಅನುಭವಿಸಿದ ರೈತರಿಗೆ ರಾಜ್ಯ ಸರ್ಕಾರದಿಂದ ಶೀಘ್ರ ಪರಿಹಾರ ಹಣ ನೀಡಲಾಗುವುದು. ನಂತರ ಕೇಂದ್ರದಿಂದ ಬರುವ ಹಣವನ್ನು ರಾಜ್ಯ ಸರ್ಕಾರ ಬಳಕೆ ಮಾಡಿಕೊಳ್ಳಲಿದೆ ಎಂದು ತಿಳಿಸಿದ್ದಾರೆ.
BIGG NEWS : ಈ ವರ್ಷ ಕಬಿನಿ ಅಣೆಕಟ್ಟು ಬಳಿ ಉದ್ಯಾನವನ ನಿರ್ಮಾಣ ಆರಂಭ : ಸಿಎಂ ಬೊಮ್ಮಾಯಿ