ಬೆಳಗಾವಿ : ಹಳೆ ಪಿಂಚಣಿ ಯೋಜನೆ ಜಾರಿಗೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಹಳೆ ಪಿಂಚಣಿ ಯೋಜನೆ ಜಾರಿ ಸಂಬಂಧ ಚರ್ಚೆಗೆ ಸರ್ಕಾರ ಒಪ್ಪಿಗೆ ಸೂಚಿಸಿದೆ.
Weight Chart : ಯಾವ ವಯಸ್ಸಿನಲ್ಲಿ ಎಷ್ಟು ತೂಕ ಇರ್ಬೇಕು ಗೊತ್ತಾ.? ಈ ನಿಯಮ ಪಾಲಿಸಿದ್ರೆ, ಆರೋಗ್ಯವಾಗಿರ್ತೀರಾ.!
ಸರ್ಕಾರಿ ನೌಕರರಿಗೆ ಹಳೇ ಪಿಂಚಣಿ ಯೋಜನೆ ಜಾರಿಗೆ ಆಗ್ರಹಿಸಿ ನೌಕರರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಕುರಿತು ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ಸದನದಲ್ಲಿ ಸಮಗ್ರ ಚರ್ಚೆ ನಡೆದ ಬಳಿಕ ಸರ್ಕಾರ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈಗಾಗಲೇ ಸಾವಿರಾರು ನಿವೃತ್ತ ನೌಕರರು ಹಳೆ ಪಿಂಚಣಿಯನ್ನೇ ಮುಂದುವರೆಸಬೇಕೆಂದು ಪ್ರತಿಭಟನೆ ನಡೆಸುತ್ತಿದ್ದಾರೆ. ಸರ್ಕಾರ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಸದಸ್ಯರು ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರು ಆಗ್ರಹಿಸಿದ್ದಾರೆ.
ಬೇರೆ ಬೇರೆ ರಾಜ್ಯಗಳಲ್ಲಿ ಹಳೆ ಪಿಂಚಣಿ ವ್ಯವಸ್ಥೆಯನ್ನೇ ಮುಂದುವರೆಸುವ ಬಗ್ಗೆ ಸದಸ್ಯರು ಸದನದ ಗಮನಕ್ಕೆ ತಂದಿದ್ದಾರೆ, ರಾಜಸ್ಥಾನ, ಛತ್ತೀಸ್ಘಡ ಹೀಗೆ ಬೇರೆ ಬೇರೆ ರಾಜ್ಯಗಳಲ್ಲಿ ಹಳೆ ಪಿಂಚಣಿಯನ್ನೇ ಮುಂದುವರೆಸಿದ್ದಾರೆ , ಅಂತಿಮವಾಗಿ ಎಲ್ಲ ಸದಸ್ಯರ ಅಭಿಪ್ರಾಯಗಳನ್ನು ಸಂಗ್ರಹಿಸಿ ತೀರ್ಮಾನ ಮಾಡಲಾಗುತ್ತದೆ ಎಂದು ಹೇಳಿದರು.
BIGG NEWS : ಮುಖ್ಯಮಂತ್ರಿ ಅಮೃತ ಜೀವನ ಯೋಜನೆ : ಹಸು/ಎಮ್ಮೆ ಘಟಕ ಸ್ಥಾಪನೆಗೆ ಕೃಷಿಕರಿಂದ ಅರ್ಜಿ ಆಹ್ವಾನ