ಬೆಂಗಳೂರು: ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪ್ರೌಢಶಾಲಾ ಸಹ ಶಿಕ್ಷಕರಿಗೆ ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕರು, ತತ್ಸಮಾನ ಗ್ರೂಪ್-ಬಿ ವೃಂದಕ್ಕೆ ಸ್ಥಾನಪನ್ನ ಬಡ್ತಿ ನೀಡೋದಕ್ಕೆ ಸಾರ್ವಜನಿಕ ಶಿಕ್ಷಣ ಇಲಾಖೆ ಗ್ರೀನ್ ಸಿಗ್ನಲ್ ನೀಡಿದೆ. ಈ ಮೂಲಕ ಬಡ್ತಿ ನಿರೀಕ್ಷೆಯಲ್ಲಿದ್ದಂತ ಪ್ರೌಢಶಾಲಾ ಸಹ ಶಿಕ್ಷಕರಿಗೆ ಗುಡ್ ನ್ಯೂಸ್ ನೀಡಿದೆ.
BIGG NEWS : `ಫೈರ್ ಮನ್’ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಸಿಹಿಸುದ್ದಿ : ಶೀಘ್ರವೇ ನೇಮಕಾತಿ ಪತ್ರ ವಿತರಣೆ
ಈ ಸಂಬಂಧ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಬೆಂಗಳೂರು ಹಾಗೂ ಮೈಸೂರು ವಿಭಾಗದಲ್ಲಿನ ಮುಖ್ಯ ಶಿಕ್ಷಕರು, ತತ್ಸಮಾನ ವೃಂದದ ಗ್ರೂಪ್-ಬಿ ಖಾಲಿ ಹುದ್ದೆಗಳಿಗೆ ಸ್ಥಾನಪನ್ನ ಬಡ್ತಿ ನೀಡಲು ಉದ್ದೇಶಿಸಲಾಗಿದೆ. ಅದರಂತೆ ಕರ್ತವ್ಯ ನಿರ್ವಹಿಸುತ್ತಿರುವ ಗ್ರೇಡ್-2 ಪ್ರೌಢಶಾಲಾ ಸಹಶಿಕ್ಷಕರ ಅಂತಿಮ ಜೇಷ್ಠತಾ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ದಿನಾಂಕ 07-04-2022ರಂದು ಪ್ರಕಟಿಸಿದ್ದ ಅಂತಿಮ ಜೇಷ್ಠತಾ ಪಟ್ಟಿಯನ್ನು ಹಿಂಪಡೆದು, ಬಳಿಕ ಪ್ರಕಟಿಸಲಾಗುತ್ತಿದೆ.
ಅಂತಿಮ ಜೇಷ್ಠತಾ ಪಟ್ಟಿಯನ್ನು ಆಧರಿಸಿ ಬೆಂಗಳೂರು, ಮೈಸೂರು ವಿಭಾಗದಲ್ಲಿ ಖಾಲಿ ಇರುವ ಮುಖ್ಯ ಶಿಕ್ಷಕರ, ತತ್ಸಮಾನ ವೃಂದದ ಹುದ್ದೆಗಳಿಗೆ ಬಡ್ತಿ ನೀಡುವ ಪ್ರಕ್ರಿಯೆ ಪ್ರಾರಂಭಿಸಲಾಗಿದೆ. ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕರ ವೃಂದದಿಂದ ಮುಖ್ಯ ಶಿಕ್ಷಕರು, ತತ್ಸಮಾನ ವೃಂದದ ಹುದ್ದೆಗಳಿಗೆ ಬಡ್ತಿ ನೀಡಬಹುದಾದ ಆದ್ಯತಾ ಪಟ್ಟಿಯನ್ನು ಇಲಾಖಾ ವೆಬ್ ಸೈಟ್ www.schooleducation.kar.nic.in ನಲ್ಲಿ ಪ್ರಕಟಿಸಲಾಗಿದೆ ಎಂದು ತಿಳಿಸಿದೆ.