ಬೆಂಗಳೂರು : ರಾಜ್ಯದ ಪ್ರಾಥಮಿಕ ಶಾಲೆಯ ಪದವೀಧರ ಶಿಕ್ಷಕರಿಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸಿಹಿಸುದ್ದಿ ನೀಡಿದ್ದು, ಪ್ರಾಥಮಿಕ ಶಾಲೆಗಳಲ್ಲಿ ಹಾಲಿ ಕಾರ್ಯನಿರ್ವಹಿಸುತ್ತಿರುವ ಪದವೀಧರ ಶಿಕ್ಷಕರನ್ನು 6 ರಿಂದ 8 ನೇ ತರಗತಿಗೆ ನಿಯುಕ್ತಿಗೊಳಿಸಲು ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
ಪ್ರಸ್ತುತ ಪ್ರಗತಿಯಲ್ಲಿರುವ 15 ಸಾವಿರ ಪದವೀಧರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳ್ಳುಉವ ಮುನ್ನ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಹಾಲಿ ಕಾರ್ಯನಿರ್ವಹಿಸುತ್ತಿರುವ ಪದವೀಧರ ಶಿಕ್ಷಕರನ್ನು 6-8 ನೇ ತರಗತಿಗೆ ನಿಯುಕ್ತಿಗೊಳಿಸಲು ಪರಿಶೀಲನೆ ನಡೆಸಿ ಅಗತ್ಯ ಕ್ರಮ ವಹಿಸಲು ಅಧಿಕಾರಿಗಳಿಗೆ ಸಚಿವ ಬಿ.ಸಿ.ನಾಗೇಶ್ ಸೂಚಿಸಿದ್ದಾರೆ.
BIG NEWS: ನಮಗೆ ‘ಮೇಡ್ ಇನ್ ಇಂಡಿಯಾ’ ಬೇಕು, ಮೇಡ್ ಇನ್ ಚೀನಾ ಅಲ್ಲ: ರಾಹುಲ್ ಗಾಂಧಿ
6 ರಿಂದ 8 ನೇ ತರಗತಿಗಳಲ್ಲಿ ಖಾಲಿ ಇರುವ ಪದವೀಧರ ಶಿಕ್ಷಕ ಹುದ್ದೆಗಳ ಪೈಕಿ ಶೇ. 40 ರಷ್ಟು ಸ್ಥಾನಗಳಿಗೆ ಹಾಲಿ ಪ್ರಾಥಮಿಕ ಶಾಲೆಗಳಲ್ಲಿ (1 ರಿಂದ 5) ಕಾರ್ಯನಿರ್ವಹಿಸುತ್ತಿರುವ ಪದವೀಧರ ಶಿಕ್ಷಕರನ್ನು ಸೇವಾ ಜೇಷ್ಠತೆ ಆಧಾರದಲ್ಲಿ ಪರಿಶೀಲಿಸ ಿಬಡ್ತಿ ನೀಡುವ ಸಂಬಂಧ ಹಣಕಾಸು ಇಲಾಖೆ ಒಪ್ಪಿಗೆ ಸೂಚಿಸಿದೆ.