ಬೆಂಗಳೂರು : ರಾಜ್ಯ ಸರ್ಕಾರವು ಪಿಯುಸಿ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ನೀಡಿದ್ದು, ಸರ್ಕಾರಿ ದ್ವಿತೀಯ ಪಿಯುಸಿ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ನೀಟ್ (NEET) ಹಾಗೂ ಸಿಇಟಿ (CET) ಪರೀಕ್ಷೆಗಳಿಗೆ ಆನ್ ಲೈನ್ ತರಬೇತಿ ನೀಡಲು ಸಿದ್ಧತೆ ನಡೆಸಿದೆ.
Online Fraud: ದೀಪಾವಳಿಗೆ ಸ್ವೀಟ್ಸ್ ಆರ್ಡರ್ ಮಾಡುವಾಗ ₹ 2.4 ಲಕ್ಷ ಕಳ್ಕೊಂಡ ಮುಂಬೈ ಮಹಿಳೆ… ಮುಂದೇನಾಯ್ತು ನೋಡಿ
ರಾಜ್ಯದ ಸರಕಾರಿ ದ್ವಿತೀಯ ಪಿಯು ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ನೀಟ್ ಹಾಗೂ ಸಿಇಟಿ ಪರೀಕ್ಷೆಗಳಿಗೆ ಉಚಿತ ಆನ್ಲೈನ್ ತರಬೇತಿ ನೀಡಲು ಪದವಿ ಪೂರ್ವ ಶಿಕ್ಷಣ ಇಲಾಖೆ ಮುಂದಾಗಿದೆ.
ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕೆ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ನಡೆಸುವ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ ಹಾಗೂ ಎಂಜಿನಿಯರಿಂಗ್ ಮೊದಲಾದ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಗೆ ತರಬೇತಿ ನೀಡಲು ಪದವಿ ಪೂರ್ವ ಶಿಕ್ಷಣ ಇಲಾಖೆ ಮುಂದಾಗಿದೆ.