ಕೋಲಾರ : ಉದ್ಯೋಗಾಕಾಂಕ್ಷಿಗಳಿಗೆ ಗೃಹ ಸಚಿವ ಅರಗಜ್ಞಾನೇಂದ್ರ ಭರ್ಜರಿ ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿ ಶೀಘ್ರವೇ 5 ಸಾವಿರ ಪೊಲೀಸರನ್ನು ನೇಮಕ ಮಾಡಲಾಗುವುದು ಎಂದು ತಿಳಿಸಿದ್ದಾರೆ.
BIGG NEWS: ಜಮ್ಮುಕಾಶ್ಮೀರದಲ್ಲಿ 1 ಗಂಟೆಯಲ್ಲಿ ಎರಡು ಸಲ ಭೂಕಂಪ; ರಿಕ್ಟರ್ ಮಾಪಕದಲ್ಲಿ 3.2 ರಷ್ಟು ತೀವ್ರತೆ ದಾಖಲು
ಕೆಜಿಎಫ್ ಪೊಲೀಸ್ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಿಸಿರುವ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಆಡಳಿತ ಕಚೇರಿ, ಶಸ್ತ್ರಾಗಾರ ಮತ್ತು ಶ್ವಾನದಳ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಪೊಲೀಸರ ಅವಶ್ಯಕತೆ ಹೆಚ್ಚಾಗಿದೆ. ಶೀಘ್ರದಲ್ಲೇ 5 ಸಾವಿರ ಪೊಲೀಸರನ್ನು ನೇಮಕ ಮಾಡಲಾಗುವುದು ಎಂದು ಹೇಳಿದ್ದಾರೆ.
ಕೆಜಿಎಫ್ ಪೊಲೀಸ್ ಪರಂಪರೆಗೆ ಒಂದು ದೊಡ್ಡ ಇತಿಹಾಸವಿದೆ. ಎರಡು ತಾಲೂಕಿಗೆ ಒಂದು ಎಸ್ ಪಿ ಕಚೇರಿ ರಾಜ್ಯದಲ್ಲಿ ಎಲ್ಲೂ ಎಲ್ಲ. ಆಡಳಿತ ಕಚೇರಿಗಾಗಿ 2.81 ಕೋಟಿ ರೂ. ವೆಚ್ಚದಲ್ಲಿ ಕಟ್ಟಡ ನಿರ್ಮಾಣ ಮಾಡಲಾಗಿದೆ ಎಂದರು.