ಬೆಂಗಳೂರು : ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಸಿಹಿಸುದ್ದಿ ಸಿಕ್ಕಿದ್ದು, ದಸರಾ ಹಬ್ಬದ ಬಳಿಕ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಕಾವೇರಿ ನಿವಾಸದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಜೊತೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ಮಾತುಕತೆ ನಡೆಸಿದ್ದು, ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ದಸರಾ ಬಳಿಕ ಬಿಜೆಪಿ ರಾಜ್ಯ ಕಾರ್ಯಕಾರಣಿ ಸಭೆ ನಿಗದಿಯಾಗಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಪಾಲ್ಗೊಳ್ಳಲಿದ್ದಾರೆ. ಈ ವೇಳೆ ಸಚಿವ ಸಂಪುಟಕ್ಕೆ ಸೇರಲಿರುವ ಪಟ್ಟಿ ಅಂತಿಮವಾಗಲಿದೆ ಎಂದು ಹೇಳಲಾಗುತ್ತಿದೆ.
BIGG NEWS : ಸಾಲಗಾರರಿಗೆ `RBI’ ನಿಂದ ಬಿಗ್ ಶಾಕ್ : ಮತ್ತೆ ಏರಲಿದೆ ಸಾಲದ ಕಂತಿನ ಹೊರೆ!
ದಸರಾ ಬಳಿಕ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಸದ್ಯ ಸಂಪುಟದಲ್ಲಿ ಖಾಲಿ ಇರುವ 6 ಸ್ಥಾನಗಳ ಭರ್ತಿ ಮಾಡುವ ಸಾಧ್ಯತೆ ಇದೆ. ಕೆ.ಎಸ್. ಈಶ್ವರಪ್ಪ, ರಮೇಶ್ ಜಾರಕಿಹೊಳಿ ಸಂಪುಟಕ್ಕೆ ಮರು ಸೇರ್ಪಡೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.