ಕೊಪ್ಪಳ : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನ ವ್ಯಾಪಾರ ಮತ್ತು ಉದ್ದಿಮೆಗೆ ನೇರಸಾಲ ಯೋಜನೆ (ಎನ್.ಎಂ.ಡಿ.ಎಫ್.ಸಿ) ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
2022-23ನೇ ಸಾಲಿನಲ್ಲಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಅನುಷ್ಠಾನವಾಗುವ ವ್ಯಾಪಾರ ಮತ್ತು ಉದ್ದಿಮೆ ನೇರಸಾಲ ಯೋಜನೆ (ಎನ್.ಎಂ.ಡಿ.ಎಫ್.ಸಿ) ಯೋಜನೆಯಡಿಯಲ್ಲಿ ವ್ಯಾಪಾರ ಮತ್ತು ಉದ್ದಿಮೆ ಚಟುವಟಿಕೆ ಕೈಗೊಳ್ಳಲು ಬಯಸುವ ಅರ್ಹ ಫಲಾನುಭವಿಗಳಿಗೆ ಆಸ್ತಿಯ (ಕಟ್ಟಡ/ ಭೂಮಿ) ಅಡಮಾನದ ಮೇಲೆ ಸಾಲವನ್ನು ಒದಗಿಸಲಾಗುವುದು.
WATCH VIDEO: ʻಪಾಕ್ ರಾಷ್ಟ್ರಧ್ವಜʼವನ್ನು ಉಲ್ಟಾ ಹಿಡಿದು ಸಂಭ್ರಮಿಸುತ್ತಿದ್ದ ಅಭಿಮಾನಿ!… ಮುಂದೇನಾಯ್ತು ನೋಡಿ
ವ್ಯಾಪಾರ ಮತ್ತು ಉದ್ದಿಮೆ ನೇರಸಾಲ ಯೋಜನೆಯ ಸೌಲಭ್ಯ ಪಡೆಯಲು ಫಲಾನುಭವಿಗಳು ಕರ್ನಾಟಕ ರಾಜ್ಯದ ನಿವಾಸಿಯಾಗಿದ್ದು, ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿರಬೇಕು. ವಯಸ್ಸು 18 ರಿಂದ 55 ವರ್ಷದೊಳಗಿರಬೇಕು. ಕೆ.ಎಂ.ಡಿ.ಸಿ ಗೆ ಸುಸ್ತಿದಾರರಾಗಿರಬಾರದು. ನಿಗಮಕ್ಕೆ ಆಸ್ತಿಯ (ಕಟ್ಟಡ/ಭೂಮಿ) ಅಡಮಾನದ ಮೇಲೆ ಮಾತ್ರ ಸಾಲವನ್ನು ಒದಗಿಸಲಾಗುತ್ತಿದ್ದು, ಆಸ್ತಿಯ ಮೌಲ್ಯವು ಸಾಲದ ಮೊತ್ತಕಿಂತ ಕಡಿಮೆ ಇರಬಾರದು. ವ್ಯಾಪಾರ ಉದ್ದಿಮೆ ಸಾಲವನ್ನು ಕುಟುಂಬದ ಒಬ್ಬ ಸದಸ್ಯರಿಗೆ ಮಾತ್ರ ನೀಡಲಾಗುವುದು. ಕುಟುಂಬದ ವಾರ್ಷಿಕ ಆದಾಯ ರೂ. 8 ಲಕ್ಷಗಳಿಗಿಂತ ಕಡಿಮೆ ಇರುವ ಅರ್ಜಿದಾರರಿಗೆ ರೂ. 20 ಲಕ್ಷಗಳವರಗೆ ಶೇ.4ರ ಬಡ್ಡಿ ದರದಲ್ಲಿ ಸಾಲ ನೀಡಲಾಗುವುದು. ಕುಟುಂಬದ ವಾರ್ಷಿಕ ಆದಾಯ ರೂ. 8 ದಿಂದ 15 ಲಕ್ಷದವರೆಗೆ ಇರುವ ಅರ್ಜಿದಾರರಿಗೆ ರೂ. 20 ಲಕ್ಷಗಳವರೆಗೆ ಶೇ.6ರ ಬಡ್ಡಿ ದರದಲ್ಲಿ ಸಾಲ ನೀಡಲಾಗುವುದು.
ಅರ್ಜಿದಾರರು ಆಧಾರ್ ಕಾರ್ಡ್ ಪ್ರತಿ, ಸಕ್ಷಮ ಪ್ರಾಧಿಕಾರದಿಂದ ನೀಡಲಾದ ಜಾತಿ ಮತ್ತು ಆಧಾಯ ಪ್ರಮಾಣ ಪತ್ರ, ಆಸ್ತಿಯ ಗುತ್ತಿಗೆ ಪತ್ರ, ವಿಭಜನ ಪತ್ರ, ಬಿಡುಗಡೆ ಪತ್ರ, ಗಿಪ್ಟ ಡೀಡ್, ಮಾರಾಟ ಪತ್ರ, ಸಿಎ (ಚಾರ್ಟರ್ಡ್ ಅಕೌಂಟೆಂಟ್) ವತಿಯಿಂದ ಧೃಡಿಕರಿಸಿದ ಯೋಜನಾ ವರದಿ, ಚಟುವಟಿಕೆಗಳ ವಿವರ, ಯೋಜನೆಗೆ ಸಂಬಂಧಿಸಿದ ದರಪಟ್ಟಿಗಳು, ಅಡಮಾನ ಮಾಡುವ ಸ್ವತ್ತಿಗೆ ಸಂಬಂಧಿಸಿದಂತೆ ಸ್ಥಳೀಯ ಸಂಸ್ಥೆಗಳಿಂದ ಪಡೆದ ಪರವಾನಿಗೆ ಪತ್ರ, ಕಟ್ಟಡದ ಖಾತಾ ಎಕ್ಸಟ್ರಾಕ್ಟ್ ಮತ್ತು ಖಾತಾ ಪ್ರಮಾಣ ಪತ್ರ ಅಥವಾ ಭೂಮಿಯ ಹಕ್ಕು ಬದಲಾವಣೆ ಪ್ರತಿ, ಕಂದಾಯ ಜಮೀನಿನ ಪಹಣಿ ಮತ್ತು ಪೋಡಿ, ವಿಭಜನಾ ಪತ್ರ, ಋಣಭಾರ ಪ್ರಮಾಣ ಪತ್ರ(ಇಸಿ) ಫಾರಂ ನಂ.15, ಸ್ಥಳೀಯ ಸಂಸ್ಥೆಗಳ ಇತ್ತೀಚಿನವರೆಗೆ ತೆರಿಗೆ ಪಾವತಿಸಿದ ರಶೀದಿ, ಸಕ್ಷಮ ಪ್ರಾಧಿಕಾರದಿಂದ ಪಡೆದ ಜಮೀನಿನ ಮಾರ್ಗದರ್ಶಿ ಬೆಲೆ, ಸ್ವತ್ತನ್ನು ಅಡಮಾನು ಮಾಡಲು ಕುಟುಂಬ ಸದಸ್ಯರ ನಿರಾಕ್ಷೇಪಣ ಪತ್ರ ವಂಶವೃಕ್ಷದೊಂದಿಗೆ, ಸ್ವಯಂ ಘೋಷಣ ಪತ್ರ, ಕಟ್ಟಡವಾಗಿದ್ದಲ್ಲಿ ನೋಂದಾಯಿತ ಮೌಲ್ಯ ಮಾಪರಿಂದ ಮೌಲ್ಯಮಾಪನ ವರದಿ/ ಮೌಲ್ಯಮಾಪನ ಪ್ರಮಾಣ ಪತ್ರ, ಜಿಲ್ಲಾ ವ್ಯವಸ್ಥಾಪಕರಿಂದ ಸ್ವತ್ತಿನ ಸ್ಥಳ ತನಿಖಾ ವರದಿ ಸೇರಿದಂತೆ ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ನವೆಂಬರ್ 15 ರೊಳಗಾಗಿ ನಿಗಮದ ವೆಬ್ಸೈಟ್ kmdconline.karnataka.gov.in ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರನ್ನು ಅಥವಾ ದೂ.ಸಂ: 08539-225008ಗೆ ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.