ಬೆಂಗಳೂರು : ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ 2022-23 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ವಿದ್ಯಾರ್ಥಿ ವೇತನಕ್ಕೆ ಆನ್ ಲೈನ್ ಅರ್ಜಿ ಆಹ್ವಾನಿಸಲಾಗಿದೆ.
ಈ ಹಿಂದೆ ವಿದ್ಯಾರ್ಥಿ ವೇತನಕ್ಕೆ ಆನ್ ಲೈನ್ ಅರ್ಜಿ ಸಲ್ಲಿಸಲು ಡಿ.31 ಕೊನೆಯ ದಿನಾಂಕ ನಿಗದಿಪಡಿಸಲಾಗಿತ್ತು. ಇದೀಗ ವಿದ್ಯಾರ್ಥಿಗಳ ಹಿತದೃಷ್ಟಿ ಹಿನ್ನೆಲೆ ಅರ್ಜಿ ಸಲ್ಲಿಸುವ ಅವಧಿಯನ್ನು 31:01:2023 ರವರೆಗೆ ವಿಸ್ತರಿಸಿ ರಾಜ್ಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಯುಕ್ತರು ಆದೇಶ ಹೊರಡಿಸಲಾಗಿದೆ. ಜ.31 ರವರೆಗೆ ವಿದ್ಯಾರ್ಥಿಗಳಿಗೆ ಆನ್ ಲೈನ್ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
BIGG NEWS : ಜ.7 ರಂದು ಕೂಡಲಸಂಗಮದಲ್ಲಿ ‘ಸಿದ್ದೇಶ್ವರ ಶ್ರೀ’ಗಳ ಚಿತಾಭಸ್ಮ ವಿಸರ್ಜನೆ
ಮೆಟ್ರಿಕ್-ನಂತರದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ ಮತ್ತು ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾದ ವೆಬ್ಸೈಟ್ ವಿಳಾಸ ಹಾಗೂ ಹೆಚ್ಚಿನ ಮಾಹಿತಿಗಾಗಿ, ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಸಂಬಂಧಿಸಿದ ಹಾಗೂ ಸರ್ಕಾರಿ ವಿದ್ಯಾರ್ಥಿವೇತನಕ್ಕೆ ಆದೇಶಗಳ ಬಗ್ಗೆ ಮಾಹಿತಿಗಾಗಿ ಭೇಟಿ ನೀಡಬೇಕಾದ ವೆಬ್ಸೈಟ್ ವಿಳಾಸ www.bcwd.karnataka.gov.in/ ಅಥವಾ ಇಲಾಖಾ ಸಹಾಯವಾಣಿ ದೂರವಾಣಿ ಸಂಖ್ಯೆ ಹಾಗೂ ಇಮೇಲ್-8050770005 bcwd.scholarship@karnataka.gov.in ಅಥವಾ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಇಮೇಲ್ postmatrichelp@karnataka.gov.in ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
BIGG NEWS : ಕಟ್ಟಡ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್ : ಟ್ಯಾಬ್ ವಿತರಣೆಗೆ ಅರ್ಜಿ ಅಹ್ವಾನ