ಬೆಂಗಳೂರು : ಸೇವಾವಧಿಯಲ್ಲಿ ಒಂದು ಬರಿ ಬಯಸಿದ ಜಿಲ್ಲೆಗೆ ವರ್ಗಾವಣೆ ಮಾಡುವಂತೆ ಶಿಕ್ಷಕರು ಮನವಿ ಮಾಡಿದ್ದು, ಈ ಬಗ್ಗೆ ಪರಿಶೀಲನೆ ನಡೆಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರಿಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಪತ್ರ ಬರೆದು ಮನವಿ ಮಾಡಿದ್ದಾರೆ.
ಪ್ರಾಥಮಿಕ ಮತ್ತು ಪ್ರೌಢಶಾಲೆ ಶಿಕ್ಷಕರು ಒಂದು ಬಾರಿ ಬಯಸಿದ ಜಿಲ್ಲೆಗೆ ವರ್ಗಾವಣೆ ಮಾಡಿಸಿಕೊಳ್ಳಲು ಅವಕಾಶ ನೀಡಬೇಕು ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು ಸಚಿವರಿಗೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಸಚಿವ ಬಿ.ಸಿ.ನಾಗೇಶ್ ಆಯುಕ್ತರಿಗೆ ಪತ್ರ ಬರೆದು ಪರಿಶೀಲಿಸುವಂತೆ ಸೂಚನೆ ನೀಡಿದ್ದಾರೆ.
BIGG NEWS : ‘KPSCಯ ವಿವಿಧ ಹುದ್ದೆ’ಗಳಿಗೆ ಅರ್ಜಿ ಸಲ್ಲಿಸಿದ್ದ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿ
Update : ಯಾದಗಿರಿಯಲ್ಲಿ ಭೀಕರ ರಸ್ತೆ ಅಪಘಾತ : ಒಂದೇ ಕುಟುಂಬದ 7 ಜನರು ಸ್ಥಳದಲ್ಲೇ ಸಾವು