ಬೆಳಗಾವಿ : ಆಸ್ತಿ ಮಾಲೀಕರಿಗೆ ಪೌರಾಡಳಿತ ಸಚಿವ ಎಂ.ಟಿ.ಬಿ ನಾಗರಾಜು ಅವರು ಸಿಹಿಸುದ್ದಿ ನೀಡಿದ್ದು, ಶೀಘ್ರವೆ ಇ-ಸ್ವತ್ತು ಸಮಸ್ಯೆಗೆ ಶೀಘ್ರವೇ ಪರಿಹಾರ ನೀಡಲಾಗುವುದು ಎಂದು ಹೇಳಿದ್ದಾರೆ.
ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್ ನ ಯು.ಟಿ. ಖಾದರ್ ಪ್ರಸ್ತಾವನೆಗೆ ಉತ್ತರಿಸಿದ ಸಚಿವರು, ಇ-ಸ್ವತ್ತು ವಹಿವಾಟು ಹೆಚ್ಚಳ ಹಿನ್ನೆಲೆಯಲ್ಲಿ ಸರ್ವರ್ ಸಮಸ್ಯೆ ಬಲಪಡಿಸಿ ಸ್ಟೋರೆಜ್ ಸಾಮರ್ಥ್ಯ ಹೆಚ್ಚಿಸಲು 65 ಕೋಟಿ ರೂ. ವೆಚ್ಚದಲ್ಲಿ ಪ್ರಸ್ತಾವನೆ ಸಿದ್ದಪಡಿಸಿ ಅನುಮೋದನೆಗಾಗಿ ಹಣಕಾಸು ಇಲಾಖೆಗೆ ಕಳಿಸಲಾಗಿದೆ ಎಂದು ತಿಳಿಸಿದ್ದಾರೆ.
ಬ್ಯಾಂಕ್ ಗ್ರಾಹಕರೇ ಗಮನಿಸಿ : ಇಲ್ಲಿದೆ `2023’ ರ ಬ್ಯಾಂಕ್ ರಜೆ ದಿನಗಳ ಪಟ್ಟಿ|Bank Holidays 2023
ರಾಜ್ಯದ ಬಹುತೇಕ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ನಿವೇಶನ, ಕಟ್ಟಡಗಳ ಆಸ್ತಿ ಹಕ್ಕಿಗೆ ಸಂಬಂಧಿದ ಇ-ಖಾತಾ ಸರ್ವರ್ ಸ್ಥಗಿತಗೊಂಡು ಸಮಸ್ಯೆಯಾಗಿದೆ. ಇದನ್ನು ಸರಿಪಡಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.