ಬೆಂಗಳೂರು : ಸ್ಕೇಟಿಂಗ್ ಗ್ರಾಮೀಣ ಮಟ್ಟಕ್ಕೂ ವಿಸ್ತರಿಸಿದ್ದು, ಇನ್ನಷ್ಟು ಪ್ರತಿಭೆಗಳು ಹೊರ ಬರಲಿವೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಬಸವನಗುಡಿ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಿದ್ಯಾಪೀಠ ವಾರ್ಡ್ 164 ಸಿ.ಟಿ ಬೆಡ್ ನಲ್ಲಿ ನಿರ್ಮಿಸಿರುವ ಕ್ರೀಡಾ ಸಂಕೀರ್ಣ ಹಾಗೂ 60 ನೇ ರಾಷ್ಟ್ರೀಯ ರೋಲರ್ ಸ್ಕೇಟಿಂಗ್ ಚಾಂಪಿಯನ್ ಶಿಪ್ 2022 ನ ಉದ್ಘಾಟನೆ ನೆರವೇರಿಸಿ ಮಾತನಾಡಿ, ಕ್ರೀಡೆಗೆ ಉತ್ಸಾಹ ಬಹಳ ಮುಖ್ಯ. ಅದಕ್ಕಾಗಿಯೇ ನಮ್ಮ ಪ್ರಧಾನಿ ಕ್ರೀಡೆಗೆ ಹೆಚ್ಚು ಆದ್ಯತೆ ಕೊಟ್ಟಿದ್ದಾರೆ. ಮೊದಲು ಖೇಲೊ ಇಂಡಿಯಾ , ಫಿಟ್ ಇಂಡಿಯಾ ನಂತರ ಜೀತೋ ಇಂಡಿಯಾ ಕಾರ್ಯಕ್ರಮಗಳನ್ನು ನೀಡಿದ್ದಾರೆ ಎಂದರು.
ದೇಶದ ವಿವಿಧ ಭಾಗಗಳಿಂದ ಆಗಮಿಸಿರುವ ಎಲ್ಲಾ ಕ್ರೀಡಾಪಟುಗಳ ಬಗ್ಗೆ ಹೆಮ್ಮೆ ಇದೆ. ಈ ಸ್ಕೇಟಿಂಗ್ ಕ್ರೀಡಾಂಗಣ ದೇಶ ಹಾಗೂ ವಿಶ್ವದಲ್ಲಿಯೇ ಅತ್ಯಂತ ಉತ್ತಮ ಕ್ರೀಡಾಂಗಣವಾಗಿದೆ. ನಮ್ಮ ಸರ್ಕಾರ ಐದು ರಾಷ್ಟ್ರೀಯ ಸ್ಕೇಟರ್ ಗಳನ್ನು ದತ್ತು ಒಡೆದು ಪ್ಯಾರಿಸ್ ಒಲಿಂಪಿಕ್ಸ್ ವರೆಗೆ ಎಲ್ಲ ರೀತಿಯ ನೆರವು ನೀಡಲಾಗುವುದು. ಒಲಿಂಪಿಕ್ ನಲ್ಲಿ ಪದಕ ಗೆಲ್ಲುವುದು ಮುಖ್ಯವಾಗಿದೆ. ಅದಕ್ಕಾಗಿ ಅಗತ್ಯವಿರುವ ರೀತಿಯ ಸಹಕಾರ ನೀಡಲಾಗುವುದು ಎಂದು ತಿಳಿಸಿದರು.
ಸಚಿವ ಆರ್.ಅಶೋಕ್, ಶಾಸಕ ರವಿಸುಬ್ರಹ್ಮಣ್ಯಂ, ಸಂಸದ ತೇಜಸ್ವಿ ಸೂರ್ಯ, ಈ ಸಂದರ್ಭದಲ್ಲಿ ಮೊದಲಾದವರು ಉಪಸ್ಥಿತರಿದ್ದರು.