ಬೆಂಗಳೂರು: SC/ST, BPL ಕಾರ್ಡ್‌ದಾರರಿಗೆ 75 ಯುನಿಟ್‌ ತನಕ ಉಚಿತ ವಿದ್ಯುತ್‌ ನೀಡಲು ರಾಜ್ಯ ಸಚಿವ ಸಂಪುಟ ಗ್ರೀನ್‌ ಸಿಗ್ನಲ್‌ ನೀಡಿದೆ. ವಿಧಾನಸಭೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಮಹತ್ವದ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ.

BIGG NEWS : ರಾಜ್ಯ ಸರ್ಕಾರದಿಂದ ಪ್ರವಾಹ ಪರಿಹಾರಕ್ಕೆ 3,600 ಕೋಟಿ ರೂ. ನೆರವು : ಸಿಎಂ ಬೊಮ್ಮಾಯಿ ಘೋಷಣೆ

ಇದೇ ವೇಳೆ ರಾಜ್ಯದ ನಗರಸಭೆ, ಪುರಸಭೆ ಮತ್ತು ಇತರೆ ಸ್ಥಳೀಯ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ 11,133 ಪೌರಕಾರ್ಮಿಕರನ್ನು ವಿಶೇಷ ನೇಮಕಾತಿಯಲ್ಲಿ ಸಕ್ರಮ ಮಾಡಲು ಕೂಡ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ.

ಸಿಹಿ ಸುದ್ದಿ: ಮೀನು ಕೃಷಿಕರ ಮಕ್ಕಳಿಗೂ ಮುಖ್ಯಮಂತ್ರಿ ವಿದ್ಯಾಸಿರಿ ಯೋಜನೆ ವಿಸ್ತರಣೆ

ಸಚಿವ ಸಂಪುಟ ಸಭೆಯಲ್ಲಿ SSLC, PU ಪರೀಕ್ಷಾ ಮಂಡಳಿ ವಿಲೀನಕ್ಕೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಎಸ್​ಎಸ್​ಎಲ್​ಸಿ ಹಾಗೂ ಪಿಯುಸಿ ಪರೀಕ್ಷಾ ಮಂಡಳಿಗಳನ್ನ ವಿಲೀನಗೊಳಿಸಿ ಏಕರೂಪ ಪರೀಕ್ಷಾ ಮಂಡಳಿಯನ್ನ ಜಾರಿಗೆ ತರಲು ನಿರ್ಧರಿಸಲಾಗಿದೆ. ಅನಗತ್ಯ ಖರ್ಚು, ಹೆಚ್ಚುವರಿ ಸಿಬ್ಬಂದಿ ನೇಮಕ ಸೇರಿದಂತೆ ಹಲವು ಅನಗತ್ಯ ಖರ್ಚಿಗೆ ಬ್ರೇಕ್ ಹಾಕಲು SSLC, PU ಪರೀಕ್ಷಾ ಮಂಡಳಿ ವಿಲೀನಕ್ಕೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ತಿಳಿದು ಬಂದಿದೆ.

Share.
Exit mobile version