ಕೊಪ್ಪಳ : 2021-22ನೇ ಶೈಕ್ಷಣಿಕ ಸಾಲಿನ, 2022ರಲ್ಲಿ ಉತ್ತೀರ್ಣರಾದ ದ್ವಿತೀಯ ಪಿ.ಯು.ಸಿ, 3 ವರ್ಷ ಪಾಲಿಟೆಕ್ನಿಕ್ ಡಿಪ್ಲೋಮಾ, ಪದವಿ, ಸ್ನಾತಕೋತ್ತರ ಪದವಿ, ಮೆಡಿಕಲ್, ಇಂಜಿನೀಯರಿಂಗ್, ಮೆಟ್ರಿಕ್ ನಂತರದ ಇತರೆ ಕೋರ್ಸ್ ಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಮಂಜೂರಿಸಲು ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

BIGG NEWS : ʻಇಂತಹ ಕೃತ್ಯ ಇಲ್ಲಿಗೆ ನಿಲ್ಲಬೇಕು, ನಿಮ್ಮಿಂದ ಮಾತ್ರ ಸಾಧ್ಯʼ : ಸುಳ್ಯದ ಯುವಕನಿಂದ ಶಾಸಕ ಹರೀಶ್‌ ಪೂಂಜಾಗೆ ತರಾಟೆ

ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನವಾಗಿದೆ. ವಿದ್ಯಾರ್ಥಿಗಳು ಪರಿಶಿಷ್ಟ ಜಾತಿಯ ಇಲಾಖಾ ವೆಬ್ಸೈಟ್ ಆದ  www.sw.kar.nic.in     ನಲ್ಲಿ ಹಾಗೂ ಪರಿಶಿಷ್ಟ ವರ್ಗದ ಇಲಾಖಾ ವೆಬ್ಸೈಟ್ ಆದ  www.tw.kar.nic.in     ನಲ್ಲಿ ಅರ್ಜಿ ಸಲ್ಲಿಸಬಹುದು. ಕೊನೆಯ ದಿನಾಂಕದ ನಂತರ ಸ್ವೀಕೃತವಾಗುವ ಮ್ಯಾನುವಲ್ನ ಯಾವುದೇ ಅರ್ಜಿ/ಕೋರಿಕೆಗಳನ್ನು ಪರಿಗಣಿಸಲು ಅವಕಾಶವಿರುವುದಿಲ್ಲ.

BIGG NEWS : ಚಂದ್ರು, ಹರ್ಷ, ನಾಳೆ ಇನ್ಯಾರೋ? ಪ್ರವೀಣ್ ನೆಟ್ಟಾರು ಹತ್ಯೆಗೆ ಸಿ.ಟಿ. ರವಿ ಆಕ್ರೋಶ

ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಕೊಪ್ಪಳ ಮತ್ತು ತಾಲ್ಲೂಕಿನ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಕೊಪ್ಪಳ, ಗಂಗಾವತಿ, ಯಲಬುರ್ಗಾ, ಕುಷ್ಟಗಿ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳು, ಗಂಗಾವತಿ, ಕುಷ್ಟಗಿ ರವರನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಚಿದಾನಂದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share.
Exit mobile version